ಬೆಂಗಳೂರು: ‘ಹುಬ್ಬಳ್ಳಿ ವಿಚಾರದಲ್ಲಿ ಶಾಂತಿ ಕಾಪಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಘಟನೆಗಳಿಗೆ ಮೂಲ ಪ್ರಚೋದನೆ ಬಿಜೆಪಿಯವರ ಕುಮ್ಮಕ್ಕಿನಿಂದಾದ ಟ್ವೀಟ್. ಇದಕ್ಕೆ ಬಿಜೆಪಿಯವರೇ ಕಾರಣ. ಅದರ ಬಗ್ಗೆ ತನಿಖೆ ಆಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ. ನಮ್ಮ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಪರಿಸ್ಥಿತಿ ನಿಯಂತ್ರಿಸುವ ಸಂದರ್ಭದಲ್ಲಿ ಕಲ್ಲೇಟು ತಿಂದು, ಕೈ ಮುರಿದುಕೊಂಡು, ನೋವು ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ ಬ್ರಿಟನ್ ಪ್ರಧಾನಿಯಡಿಯೂರಪ್ಪ ಅವರಾಗಲಿ, ಅಶೋಕ್ ಅವರಾಗಲಿ ಪರಿಸ್ಥಿತಿ ತಿಳಿಗೊಳಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಬದಲಿಗೆ ಅವರು ಬೇಕೆಂದು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಸುಮ್ಮನೆ ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದರು. ಇದನ್ನೂ ಓದಿ: 30 ಲಕ್ಷದ ಚಿನ್ನವನ್ನು ಗುದನಾಳ, ವಿಗ್‌ನಲ್ಲಿ ಬಚ್ಚಿಟ್ಟುಕೊಂಡಿದ್ದ ಕಿಲಾಡಿ ಕಳ್ಳನ ಬಂಧನಅವರು ತಮ್ಮ 40% ಕಮಿಷನ್ ವಿಚಾರ ಮುಚ್ಚಿಹಾಕಲು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ನವರಿಗೂ ಹುಬ್ಬಳ್ಳಿ ಗಲಭೆಗೂ ಯಾವುದೇ ಸಂಬಂಧ ಇಲ್ಲ. ನಮ್ಮವರು ಶಾಂತಿ ಕಾಪಾಡಲು ಶ್ರಮಿಸಿದ್ದಾರೆ ಅಷ್ಟೇ ಎಂದು ಹೇಳಿದರು.Sign in to your account
Username or Email Address


Password

 Remember Me


