ಮೈಸೂರು: ಅರಮನೆ ನಗರಿ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಲ್‍ಬೆಟ್ಟ ಬಳಿ ಭೀಕರ ಅಪಘಾತ ಸಂಭವಿಸಿದ್ದು,  6 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.ಮೃತರನ್ನು ಅನಿಲ್ (44), ಸಂತೋಷ್ (42) (ಜೀಪ್ ಚಲಾಯಿಸುತ್ತಿದ್ದವನು), ಬಾಬು (48), ರಾಜೇಶ್ (40), ದಯಾನಂದ್ (42) ಹಾಗೂ ವಿನೀತ್ (37) ಎಂದು ಗುರುತಿಸಲಾಗಿದೆ. ಮೃತರೆಲ್ಲರು ಮಡಿಕೇರಿಯ ಪಾಲಿಬೆಟ್ಟ ನಿವಾಸಿಗಳು. ಮೈಸೂರು – ಹುಣಸೂರು ರಸ್ತೆಯಲ್ಲಿ ಅಪಘಾತ ನಡೆದಿದೆ. ಇದನ್ನೂ ಓದಿ: ಅಮಿತ್‌ ಶಾ ಮನೆ ಕೆಡವಲು ಬುಲ್ಡೋಜರ್‌ ಬಳಸಿ: ರಾಘವ್‌ ಛಡ್ಡಾಹುಣಸೂರಿನಿಂದ ಸ್ನೇಹಿತನ ಮದುವೆ ಮುಗಿಸಿಕೊಂಡು ಕೊಡಗಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.Sign in to your account
Username or Email Address


Password

 Remember Me


