ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರುವ ಯತ್ನ ನಡೆದಿದ್ದು ಪೋರ್ನ್ ವೆಬ್ ಸೈಟ್‍ನಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರಿನಲ್ಲಿ ಅಶ್ಲೀಲ ವೀಡಿಯೋಗಳನ್ನು ಪೋಸ್ಟ್ ಮಾಡಿರುವ ಘಟನೆ ನಡೆದಿದೆ.ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬರುತ್ತಿದೆ. ಈ ಕುರಿತಂತೆ ಈಗಾಗಲೇ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಅವರು ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೊಳಿ ಹೆಸರು ದುರ್ಬಳಕೆ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣಕ್ರಮಕ್ಕೆ ಸತೀಶ್ ಜಾರಕಿಹೊಳಿ ಅಭಿಮಾನಿ ಒತ್ತಾಯಿಸಿದ್ದಾರೆ.Sign in to your account
Username or Email Address


Password

 Remember Me


