ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರ ‘ಭೀಮ’ನಿಗೆ ನಿನ್ನೆ ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು.  ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ“ಸಲಗ” ನಂತರ “ಭೀಮ” ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಯುವ ಹಾಗೂ ಉತ್ಸಾಹಿ ನಿರ್ಮಾಪಕರಾದ ಜಗದೀಶ್ ಹಾಗೂ ಕೃಷ್ಣ ಸಾರ್ಥಕ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ಕಂಡ ಕೆಲವು ಘಟನೆಗಳನ್ನು ಆಧರಿಸಿ ಕಥೆ ಸಿದ್ದಪಡಿಸಿಕೊಂಡಿದ್ದೀನಿ. ಚಿತ್ರಕ್ಕೆ ಶೀರ್ಷಿಕೆ ಏನಿಡಬೇಕೆಂದು ಬಹಳ ದಿನಗಳ ಚರ್ಚೆ ನಡೆದ ನಂತರ “ಭೀಮ” ಎಂಬ ಶೀರ್ಷಿಕೆ ಆಯ್ಕೆ ಮಾಡಿಕೊಂಡಿದ್ದೀವಿ.  ಶೀರ್ಷಿಕೆ ಕೊಡಿಸಿದ ಜಗದೀಶ್ ಅವರಿಗೆ ಧನ್ಯವಾದ. ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ನಿರ್ದೇಶನದ ಜೊತೆಗೆ ನಾನು ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದೀನಿ.  ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್“ಜಯಮ್ಮನ ಮಗ” ಚಿತ್ರದಲ್ಲಿ ನನ್ನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಲ್ಯಾಣಿ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.  ಬ್ಲ್ಯಾಕ್ ಡ್ರ್ಯಾಗನ್ ಮಂಜು ಅವರು ಸೇರಿದಂತೆ ಸಾಕಷ್ಟು ಹೊಸ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಾಯಕಿಯ ಆಯ್ಕೆ ನಡೆಯುತ್ತಿದೆ. ಇಂದಿನಿಂದ ಚಿತ್ರೀಕರಣ ಆರಂಭಿಸುತ್ತಿದ್ದೇನೆ. ನನ್ನ “ಸಲಗ” ಚಿತ್ರದ ಮುಹೂರ್ತ ಸಮಾರಂಭ ಸಹ ಈ ದೇವಸ್ಥಾನದಲ್ಲಿ ನಡೆದಿತ್ತು. ಎರಡನೇ ಚಿತ್ರದ ಮುಹೂರ್ತ ಇಲ್ಲೇ ನಡೆಯಬೇಕೆಂದು ಆಸೆಯಿತ್ತು. ಇಂತಹ ದೇವಸ್ಥಾನ ಪರಿಚಯಿಸಿದ ಕೆ.ಪಿ.ಶ್ರೀಕಾಂತ್ ಅವರಿಗೆ ಧನ್ಯವಾದ.  ಶ್ರೀನಗರ ಕಿಟ್ಟಿ, ಧನಂಜಯ ಸೇರಿದಂತೆ ಅನೇಕ ಚಿತ್ರರಂಗದ ಗೆಳೆಯರು ಆಗಮಿಸಿರುವುದು ಖುಷಿ ತಂದಿದೆ ಎಂದರು ನಾಯಕ ಹಾಗೂ ನಿರ್ದೇಶಕ ದುನಿಯಾ ವಿಜಯ್. ಇದನ್ನೂ ಓದಿ : ಜೇಮ್ಸ್ ಟೀಮ್ ಮೊದಲೇ ಈ ಕೆಲಸ ಮಾಡಬೇಕಿತ್ತು : ನಟ ಶಿವರಾಜ್ ಕುಮಾರ್“ಜಯಮ್ಮನ ಮಗ” ಚಿತ್ರದಲ್ಲಿ ನನಗೆ ತಾಯಿಯ ಪಾತ್ರ ನೀಡಿದ್ದರು. ಈ ಚಿತ್ರದಲ್ಲೂ ನಾನು ಅವರ ತಾಯಿ. ಆ ಚಿತ್ರದಲ್ಲಿ ಸೌಮ್ಯ ಸ್ವಭಾವದ ತಾಯಿಯಾಗಿ ಕಾಣಿಸಿಕೊಂಡಿದ್ದೆ. ಇದರಲ್ಲಿ ಸ್ವಲ್ಪ ರೌದ್ರ ಸ್ಭಭಾವದವಳು ಎಂದು ಹಿರಿಯ ನಟಿ ಕಲ್ಯಾಣಿ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಅಂದಹಾಗೆ ಈ ಸಿನಿಮಾದ ಟೈಟಲ್ ಭೀಮ ನಟಿ ಮಾಲಾಶ್ರೀ ಅವರ ಬಳಿಯಿತ್ತು. ನಿರ್ಮಾಪಕ ಜಗದೀಶ್ ಮತ್ತು ದುನಿಯಾ ವಿಜಯ್ ಕೇಳಿದಾಗ ಪ್ರೀತಿಯಿಂದಲೇ ಆ ಟೈಟಲ್ ಕೊಟ್ಟಿದ್ದಾರೆ ನಟಿ ಮಾಲಾಶ್ರೀ.Sign in to your account
Username or Email Address


Password

 Remember Me


