ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವ ಸುದ್ದಿಯನ್ನು ಪಬ್ಲಿಕ್ ಟಿವಿ ಡಿಜಿಟಲ್ ಈ ಹಿಂದೆಯೇ ಪ್ರಕಟಿಸಿದೆ. ಈ ಬಾರಿ ನಿರ್ದೇಶಕರು ಯಾವ ರೀತಿಯ ಕಥೆಯನ್ನು ಹೇಳಿದ್ದಾರೆ ಎನ್ನುವ ಸಣ್ಣ ಸುಳಿವನ್ನೂ ವರದಿ ಮಾಡಿತ್ತು. ಅದೀಗ ನಿಜವಾಗಿದೆ. ಸ್ವತಃ ವಿವೇಕ್ ಅಗ್ನಿಹೋತ್ರಿ ಅವರೇ ತಾವು ಆಯ್ಕೆ ಮಾಡಿಕೊಂಡಿರುವ ಕಥೆಯ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ : ಅಜ್ಞಾತವಾಸಿಯಾದ ರಂಗಾಯಣ ರಘು ಮತ್ತು ಪಾವನಾಈ ಬಾರಿ ಆಯ್ಕೆ ಮಾಡಿಕೊಂಡ ವಿಷಯವು 1984ರಲ್ಲಿ ನಡೆದ ನೈಜ ಘಟನೆಯನ್ನೇ ಆಧರಿಸಿದೆಯಂತೆ. ಆ ಸಮಯದ ಸತ್ಯವೇ ಬೇರೆಯಿದೆ. ಅದನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ದೆಹಲಿಯಷ್ಟೇ ಅಲ್ಲ, ತಮಿಳು ನಾಡಿಗೆ ಸಂಬಂಧಿಸಿದ ಒಂದಷ್ಟು ಸತ್ಯಗಳನ್ನೂ ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ. ಇದನ್ನೂ ಓದಿ : ಲಾಕಪ್ ನಲ್ಲಿ ಗಳಗಳನೆ ಅತ್ತ ಪೂನಂ: ಈ ನಟಿಗೆ ಅದೆಂಥ ಅವಮಾನ?ನಾವು ಸತ್ಯವನ್ನು ಮಾತನಾಡಿದಾಗ ಎಲ್ಲರೂ ಅದನ್ನು ಒಪ್ಪಿಕೊಳ್ಳುತ್ತಾರೆ. ಸರಕಾರಗಳು ಕೂಡ ತಲೆಬಾಗುತ್ತವೆ. ಈಗ ಮತ್ತೊಂದು ಸತ್ಯ ದರ್ಶನಕ್ಕಾಗಿ ಸಿನಿಮಾ ಮಾಡುತ್ತಿರುವೆ. ಇಷ್ಟು ವರ್ಷಗಳಿಂದ ದೆಹಲಿ ಭಾರತವನ್ನು ಹೇಗೆ ನಾಶ ಮಾಡುತ್ತಿದೆ ಎನ್ನುವ ಕುತೂಹಲದ ಅಂಶಗಳು ಕೂಡ ಇವೆ ಎಂದು ಮಾಧ್ಯಮಗಳ ಜತೆ ಮಾತನಾಡಿದ್ದಾರೆ ವಿವೇಕ್ ಅಗ್ನಿಹೋತ್ರಿ. ಇದನ್ನೂ ಓದಿ : ಪುನೀತ್ ಬ್ಯಾನರ್ ಗಾಗಿ ನಡೆಯಿತು ಮಾರಾಮಾರಿ : ರಾಡ್ ಹಿಡಿದುಕೊಂಡು ಗಲಾಟೆದೆಹಲಿಯನ್ನು ಯಾರೆಲ್ಲ ಆಳಿದರು, ಏನೆಲ್ಲ ಮಾಡಿದರು. ದೆಹಲಿ ಚರಿತ್ರೆಯಲ್ಲಿ ಉಳಿದುಕೊಂಡಿರುವ ಕಪ್ಪು ಚುಕ್ಕೆಯನ್ನೇ ಈ ಬಾರಿ ಬೆಳ್ಳಿ ಪರದೆಯ ಮೇಲೆ ತೋರಿಸುವ ಪ್ರಯತ್ನ ನಡೆಯಲಿದೆಯಂತೆ. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಅತೀ ಶೀಘ್ರದಲ್ಲೇ ತಾರಾಗಣವನ್ನೂ ಆಯ್ಕೆ ಮಾಡಿಕೊಳ್ಳಲಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ : ಕೆಜಿಎಫ್ 2 : ನಾಲ್ಕೇ ದಿನಕ್ಕೆ 550 ಕೋಟಿ ಬಾಚಿದ ರಾಕಿಭಾಯ್ಸತ್ಯ ಘಟನೆಗಳನ್ನು ಆಧರಿಸಿದ ಸಿನಿಮಾಗಳನ್ನೇ ಮಾಡುತ್ತಿರುವ ವಿವೇಕ್ ಅಗ್ನಿಹೋತ್ರಿಗೆ ಜೀವ ಬೆದರಿಕೆಯಿದೆ ಅಂತೆ. ಹಾಗಾಗಿ ಹೆಚ್ಚಿನ ಭದ್ರತೆಯನ್ನು ಅವರಿಗೆ ನೀಡಲಾಗಿದೆ. ಅವರ ಚಲನವಲನಗಳ ಮೇಲೆ ಖಾಕಿ ಪಡೆ ಕಣ್ಣಿಟ್ಟು ಕಾಪಾಡುತ್ತಿದೆ.Sign in to your account
Username or Email Address


Password

 Remember Me


