ಕಲಬುರಗಿ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‍ಐ) ನೇಮಕಾತಿ ಅಕ್ರಮ ಕುರಿತಾಗಿ ಸಿಐಡಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಹಲವರನ್ನು ಬಂಧಿಸಿದ ಪೊಲೀಸರು ಇಂದು(ಭಾನುವಾರ) ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ದಿವ್ಯಾ ಹಾಗರಗಿ ಮನೆ ದಾಳಿ ಮಾಡಲು ಮುಂದಾಗಿದ್ದಾರೆ.ರಾಜ್ಯದಲ್ಲಿ 545 ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಇರುವ ಕಾರಣಕ್ಕೆ ಸಿಐಡಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಡಿವೈಎಸ್‍ಪಿ ಶಂಕರಗೌಡ ನೇತೃತ್ವದ ತಂಡ ಬಿಜೆಪಿ ಮುಖಂಡೆ ಹಾಗೂ ಹಿಂದೂಪರ ಕಾರ್ಯಕರ್ತೆ ದಿವ್ಯಾ ಹಾಗರಗಿ ಮನೆ ತಪಾಸಣೆಗೆ ಆಗಮಿಸಿದೆ. ಇದನ್ನೂ ಓದಿ: ಹಸ್ತಮೈಥುನದಿಂದ ಶ್ವಾಸಕೋಶದ ತೊಂದರೆಗೆ ಸಿಲುಕಿದ ಯುವಕ – ಎಕ್ಸ್‌ರೇ ನೋಡಿ ಶಾಕ್‌ಕಲಬುರಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಇದೇ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದೆ.ದಿವ್ಯಾ ಹಾಗರಗಿಗೆ ಶಾಲೆ ಸೇರಿದ್ದರಿಂದ ಇಂದು(ಭಾನುವಾರ) ಅವರ ಮನೆಗೆ ಸಿಐಡಿ ತಂಡ ದಾಳಿ ನಡೆಸಿದೆ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ದಿವ್ಯಾ ಹಾಗರಗಿ ಪತಿ ರಾಜೇಶ್‍ನನ್ನು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಹಾಗರಗಿ ವಿಜಯಪುರಕ್ಕೆ ಹೋಗಿದ್ದಾರೆ ಎಂದು ರಾಜೇಶ್ ಸಿಐಡಿ ತಂಡಕ್ಕೆ ಮಾಹಿತಿ ನೀಡಿದರು. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರುSign in to your account
Username or Email Address


Password

 Remember Me


