ವಿಜಯನಗರ: ಹುಬ್ಬಳ್ಳಿಯಲ್ಲಿ ನಿನ್ನೆ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಆಗಿದೆ ಎಂದು ಬಸವರಾಜ ಬೊಮ್ಮಾಯಿ ಕೆಲ ಪ್ರಚೋದನಾಕಾರಿ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚೋದನಾಕಾರಿ ಕೃತ್ಯಗಳನ್ನು ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಈ ರೀತಿಯ ಸಂಘಟನೆಗಳನ್ನು ಬಿಡುವುದಿಲ್ಲ. ಇದನ್ನು ಕರ್ನಾಟಕ ರಾಜ್ಯ ಸಹಿಸೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಮೋದಿ ಹೆಸರೇಳಿಕೊಂಡು ಗೆದ್ದು ಬರುತ್ತೇವೆ ಎಂಬ ಭ್ರಮೆಯಿಂದ ಹೊರಬನ್ನಿ: ಬಿ.ಎಲ್ ಸಂತೋಷ್ಇದಕ್ಕೆ ಮತ್ತೆ ಬೇರೆ ರೀತಿಯ ರಾಜಕೀಯ ಬಣ್ಣ ಬಳಿಯೋದು ಬೇಡ. ಯಾರೇ ಘಟನೆಯಲ್ಲಿ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು. ಹಳೇ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೆ ಈ ತರಹದ ಘಟನೆ ಸಂಭವಿಸಬಾರದು. ಕಾನೂನು ಸುವ್ಯವಸ್ಥೆ ಅಡಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸ್ವರ್ಣಯುಗ ಆರಂಭವಾಗಿದೆ: ಜೆ.ಪಿ ನಡ್ಡಾSign in to your account
Username or Email Address


Password

 Remember Me


