– ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ಈ ನಿವೇಶನಗಳು ತೃಣಕ್ಕೆ ಸಮ: ಪಾರ್ವತಿ ಸಿದ್ದರಾಮಯ್ಯಬೆಂಗಳೂರು: ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ ಎಂದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಮುಡಾ ಆಯುಕ್ತರಿಗೆ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.ಮುಡಾ ಹಗರಣ (MUDA Scam Case) ಪತಿ ಸಿದ್ದರಾಮಯ್ಯರಿಗೆ (Siddaramaiah) ಕಂಟಕವಾಗಿರುವ ಬೆನ್ನಲ್ಲೇ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಆಯುಕ್ತರಿಗೆ ಪತ್ರ ಬರೆದು ನಿವೇಶನಗಳನ್ನು ವಾಪಸ್‌ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಪ್ರಕರಣದ ರಾಜಕೀಯ ಬೆಳವಣಿಗೆಗಳ ಕುರಿತು ಬೇಸರವನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ಮುಡಾ ಸೈಟ್‌ ವಿವಾದ – 14 ನಿವೇಶನ ವಾಪಸ್‌ಗೆ ಮುಂದಾದ ಸಿಎಂ ಪತ್ನಿ; ಮುಡಾ ಆಯುಕ್ತರಿಗೆ ಪತ್ರನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ಇದನ್ನೂ ಓದಿ: MUDA Scam Case: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ EDನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


