– ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರದ ಬಗ್ಗೆ ಬಿಜೆಪಿ ನಾಯಕರ ಪ್ರತಿಕ್ರಿಯೆಬೆಂಗಳೂರು: ಮಹತ್ವದ ಬೆಳವಣಿಗೆಯೊಂದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಮುಡಾ ನಿವೇಶನಗಳನ್ನು ವಾಪಸ್‌ ನೀಡಲು ಮುಂದಾಗಿರುವ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಪ್ರತಿಕ್ರಿಯೆ ನೀಡಿದ್ದಾರೆ. ಈ ನಿರ್ಧಾರವು ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ಜಯ ಎಂದು ಬಣ್ಣಿಸಿದ್ದಾರೆ.ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.… pic.twitter.com/eIkCuVpMgX— R. Ashoka (@RAshokaBJP) September 30, 2024ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ನಿರ್ಧಾರ ಕುರಿತು ಆರ್‌.ಅಶೋಕ್‌ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು‌ ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಸೈಟ್‌ ವಾಪಸ್‌ಗೆ ಸಿಎಂ ಪತ್ನಿ ನಿರ್ಧಾರ – ಕಾನೂನು ಹೋರಾಟದ ಪರಿಣಾಮ ಏನು?ಸಿಎಂ @siddaramaiah ನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು,✅ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ.✅ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ.✅ ಜಗ್ಗಲ್ಲ, ಬಗ್ಗಲ್ಲ…— R. Ashoka (@RAshokaBJP) September 30, 2024ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಬಿಜೆಪಿ ನಾಯಕ ಆರ್‌.ಅಶೋಕ್‌ ಅವರು ಅಭಿಪ್ರಾಯಪಟ್ಟಿದ್ದಾರೆ.ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಮುಂದಾಗಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನಿವೇಶನ, ಆಸ್ತಿ, ಸಂಪತ್ತು ನನ್ನ ಪತಿ ಘನತೆ, ಮರ್ಯಾದೆಗಿಂತ ದೊಡ್ಡದಲ್ಲ: ಸಿಎಂ ಪತ್ನಿSign in to your account
Username or Email Address


Password

 Remember Me


