ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಪ್ರಧಾನಮಂತ್ರಿಗಳ ಖಾಸಗಿ ಕಾರ್ಯದರ್ಶಿ’ ಎಂದವನ ವಿರುದ್ಧ ದಾಖಲಾಯ್ತು ಎಫ್‍ಐಆರ್ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದ್ಯ ಸೇವಿಸಿ ಗುರುದ್ವಾರ ಪ್ರವೇಶಿಸಿದ ಆರೋಪ- ಪಂಜಾಬ್ ಸಿಎಂ ವಿರುದ್ಧ ದೂರು






 Advertisement 




Sign in to your account
Username or Email Address


Password

 Remember Me


