ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 45 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ನಿನ್ನೆಗಿಂತ 2 ಪ್ರಕರಣ ಇಳಿಕೆ ಕಂಡಿದೆ. ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಈ ಮೂಲಕ ರಾಜ್ಯದಲ್ಲಿ 0.00% ಮರಣ ಪ್ರಮಾಣ ಇಂದು ಕೂಡ ಮುಂದುವರಿದಿದೆ.ಬೆಂಗಳೂರು ನಗರದಲ್ಲಿ ಇಂದು 41 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.73% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,441ರಲ್ಲಿ ಸ್ಥಿರವಾಗಿದೆ. ಒಟ್ಟು 45 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ಈವರೆಗೆ ರಾಜ್ಯದಲ್ಲಿ ಒಟ್ಟು 39,46,315 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,775 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 36,797 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 6,107 ಸ್ಯಾಂಪಲ್ (ಆರ್‌ಟಿಪಿಸಿಆರ್ 4,938 + 1,169 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹರ್ಷ ಕೊಲೆಯ ಪ್ರತೀಕಾರಕ್ಕೆ ನಡೆಯಿತಾ ಸಂಚು – ಪೊಲೀಸ್ ಕಾರ್ಯಾಚರಣೆಯಿಂದ ಸಂಚು ವಿಫಲಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 41, ಮೈಸೂರಿನಲ್ಲಿ 2 ಮತ್ತು ಕೋಲಾರದಲ್ಲಿ 1 ಪಾಸಿಟಿವ್ ಕೇಸ್ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


