ರಾಯಚೂರು: ಲಾರಿ ಬೈಕ್‍ಗೆ ಡಿಕ್ಕಿ ಹೊಡೆದಿದ್ದು, ಫಾರ್ಮಾ ಕಂಪನಿ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.ನಗರದ ಹೈದ್ರಾಬಾದ್ ರಸ್ತೆಯ ಎಂಪಿಸಿಎಲ್ ಕಾರ್ಖಾನೆ ಬಳಿ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಮಲ್ಲಾರೆಡ್ಡಿ(40) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆಫಾರ್ಮಾ ಕಂಪನಿಯೊಂದರ ನೌಕರ ಮಲ್ಲಾರೆಡ್ಡಿ ರಾತ್ರಿ ಪಾಳೆಯ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ಬೆಳಗಿನ ಜಾವ ಘಟನೆ ನಡೆದಿದೆ. ಹೈದ್ರಾಬಾದ್ ಕಡೆ ಹೊರಟಿದ್ದ ಲಾರಿ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಘಟನೆ ಹಿನ್ನೆಲೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


