ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 49 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಈ ಮೂಲಕ ರಾಜ್ಯದಲ್ಲಿ 0.00% ಮರಣ ಪ್ರಮಾಣ ಮುಂದುವರಿದಿದೆ.ಬೆಂಗಳೂರು ನಗರದಲ್ಲಿ ಇಂದು 47 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.64% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,441ಕ್ಕೆ ತಲುಪಿದೆ. ಒಟ್ಟು 37 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಈಶ್ವರಪ್ಪಈವರೆಗೆ ರಾಜ್ಯದಲ್ಲಿ ಒಟ್ಟು 39,46,270 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,730 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 14,782 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 7,622 ಸ್ಯಾಂಪಲ್ (ಆರ್‌ಟಿಪಿಸಿಆರ್ 6,308 + 1,314 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೂ ಮುನ್ನ ಗಣಪನ ಬಲಭಾಗದಿಂದ ಬಿತ್ತು ಹೂ ಪ್ರಸಾದಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 47, ದಕ್ಷಿಣಕನ್ನಡ ಮತ್ತು ಧಾರವಾಡದಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


