ಬೆಳಗಾವಿ: ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯದಿಂದ ಸ್ವಾಗತ ಮಾಡುತ್ತೇನೆ. ಸೋವಾರದವರೆಗೆ ಕಾಯುವುದು ಬೇಡ ದಾಖಲೆಗಳು ಇದ್ದರೆ, ಇಂದೇ ಬಿಡುಗಡೆ ಮಾಡಲಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಹೋರಾಟ ಮಾಡಿದ್ದು, ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಹಾಗೂ ಕೆ.ಎಸ್. ಈಶ್ವರಪ್ಪ ಅವರ ಬಂಧನ ಆಗಬೇಕು ಅಂತ. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನನ್ನ ಸಿಡಿ ಕೇಸ್, ಸಂತೋಷ್ ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ರಮೇಶ್ ಜಾರಕಿಹೊಳಿಆತ್ಮಹತ್ಯೆಗೆ ಪ್ರಚೋದನೆ ಕೊಟ್ಟವರು ಯಾರು? ಇಂತವರ ರಕ್ಷಣೆ ಮಾಡಿದರೆ ಜನ ಸಾಮಾನ್ಯರ ಹಿತವನ್ನು ಕಾಪಾಡುವುದು ಹೇಗೆ? ಗುತ್ತಿಗೆದಾರ ಅಳಲು ಕೇಳುವವರು ಯಾರು? ಪ್ರತಿಯೊಂದು ಇಲಾಖೆಯ ಪ್ರತಿಯೊಬ್ಬ ಗುತ್ತಿಗೆದಾರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ಪಕ್ಷ ನಾಳೆಯಿಂದ ಜಿಲ್ಲಾವಾರು ಪ್ರವಾಸ ಕಾರ್ಯಕ್ರಮವನ್ನು ಮಾಡುತ್ತಿದೆ. ವಿಧಾನಸೌಧದಲ್ಲಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಡಿಕೆಶಿ ನೇತೃತ್ವದಲ್ಲಿ ಹೋರಾಟ ಮಾಡಲಾಗುತ್ತಿದೆ. ಬೆಳಗಾವಿ ನಗರದಲ್ಲಿ ಎಪ್ರಿಲ್ 17ರಂದು ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಸಂತೋಷ್ ಕೇಸ್ ಹಿಂದೆಯೂ ‘ಮಹಾನಾಯಕ’ ಇದ್ದಾನೆ: ರಮೇಶ್ ಜಾರಕಿಹೊಳಿSign in to your account
Username or Email Address


Password

 Remember Me


