ಬೆಂಗಳೂರು: ಗುತ್ತಿಗೆದಾರ ಸಂತೊಷ ಆತ್ಮಹಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ ಎಂಬ ಆರೋಪ ಕೇಳಿ ಬಂದ ದಿನವೇ 29 PDOಗಳ ವರ್ಗಾವಣೆಯಾದ ಘಟನೆ ಸಾಕಷ್ಟು ಅನುಮಾನಗಳಿಗೆ ಈಡು ಮಾಡುಕೊಟ್ಟಿದೆ.ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿತ್ತು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಾಧ್ಯಮದವರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ವಾಟ್ಸಪ್ ಮಾಡಿದ್ದರು. ಆ ವೇಳೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಇದ್ದರು.ಇದೀಗ ಇದೇ ದಿನದಂದು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 29 PDOಗಳ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅದರಲ್ಲೂ ಮೈಸೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ PDOಗಳ ವರ್ಗಾವಣೆ ಮಾಡಿದೆ. ಇದಕ್ಕೆ ಸಿಎಂ ಅನುಮೋದನೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ವರ್ಗಾವಣೆ ಮಾಡಿದೆ. ಇದನ್ನೂ ಓದಿ: ಈಶ್ವರಪ್ಪನವರನ್ನು ಬಂಧಿಸಿ ಅನ್ನೋರಿಗೆ ನಾಚಿಕೆಯಾಗ್ಬೇಕು: ರೇಣುಕಾಚಾರ್ಯSign in to your account
Username or Email Address


Password

 Remember Me


