ಹಾಸನ: ಏಪ್ರಿಲ್ 17 ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಕಲೇಶಪುರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಪ್ರಧಾನಿ ಒಂದೇ ಒಂದು ಮಾತು – ಈಶ್ವರಪ್ಪ ದಿಢೀರ್‌ ರಾಜೀನಾಮೆರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಚಿವ ಈಶ್ವರಪ್ಪ ಅವರ ಮೇಲೆ ಭ್ರಷ್ಟಚಾರದ ಆರೋಪ ಕೇಳಿ ಬಂದಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ದೂರು ದಾಖಲಾಗಿದೆ. ಈಶ್ವರಪ್ಪ ಪ್ರಕರಣದಲ್ಲಿ ನಿರ್ದೋಷಿ ಎಂದು ಸಾಬೀತಾದರೆ ಪುನ: ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆಯಲಿ. ದೇಶದಲ್ಲಿ ಎಲ್ಲ ಧರ್ಮದವರು ಬದುಕುವ ಹಕ್ಕನ್ನು ಪಡೆದಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಹಿಂದೂ, ಮುಸ್ಲಿಮರ ನಡುವೆ ಸಾಮರಸ್ಯವನ್ನು ಕದಡುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್‌ನಿಂದ ದಲಿತ ಸಿಎಂ ಮಾಡುವೆ: ಹೆಚ್‌ಡಿಕೆ ಘೋಷಣೆ






 Advertisement 




Sign in to your account
Username or Email Address


Password

 Remember Me


