ಮಡಿಕೇರಿ: ಮದ್ಯದ ಅಂಗಡಿಯ ಬಾಗಿಲು ಒಡೆದು ಹಣ, ಮದ್ಯದ ಬಾಟಲ್ ಹಾಗೂ ಸಿಸಿ ಟಿವಿಯ ಹಾರ್ಡ್‌ಡಿಸ್ಕ್ ಸಮೇತ ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.ನೆಲ್ಯಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಇರುವ ನ್ಯಾಷನಲ್ ವೈನ್ ಶಾಪ್‍ನಲ್ಲಿ ಕಳೆದ ರಾತ್ರಿ ಬೀಗ ಒಡೆದು ಒಳ ನುಗ್ಗಿದ ಕಳ್ಳರು, ವೈನ್ ಶಾಪ್‍ನಲ್ಲಿ ಇದ್ದ ಮದ್ಯದ ಬಾಟಲಿ ಹಾಗೂ ಒಂದು ಸಾವಿರ ಹಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಸನ್ನಿ ಲಿಯೋನ್ ಫೋಟೋ ಇದೆಯಾ? : ಡಿಸ್ಕೌಂಟ್ ನಲ್ಲಿ ಚಿಕನ್ ಪಡೆಯಿರಿಇಂದು ಬೆಳಗ್ಗೆ ವೈನ್ ಶಾಪ್ ಮಾಲೀಕ ಅಂಗಡಿಯನ್ನು ತೆರೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ವೈನ್ ಶಾಪ್ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿ ಕಳ್ಳತನ ಅಗಿರುವ ಬಗ್ಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಕೊಂಡು ಅರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸಂತೋಷ್ ಕೇಸ್ ಹಿಂದೆಯೂ ‘ಮಹಾನಾಯಕ’ ಇದ್ದಾನೆ: ರಮೇಶ್ ಜಾರಕಿಹೊಳಿ 






 Advertisement 




Sign in to your account
Username or Email Address


Password

 Remember Me


