ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಹೋರಾಟ ಮಾಡುತ್ತಿವೆ. ಈ ಬೆನ್ನಲ್ಲೇ ಪಾಟೀಲ್ ಸಾವಿನ ಬಗ್ಗೆ ಅನುಮಾನವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೊರಹಾಕಿದರು.ಚಿಕ್ಕಮಗಳೂರಿನಲ್ಲಿ ಪ್ರಕರಣ ಕುರಿತು ಮಾತನಾಡಿದ ಅವರು, ಈಶ್ವರಪ್ಪ, ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ರಾಜೀನಾಮೆ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಡಿವೈಎಸ್‍ಪಿ ಗಣಪತಿ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಹೋಲಿಕೆ ಮಾಡಲು ಬರುವುದಿಲ್ಲ. ಸಮಾಜದಲ್ಲಿ ಸತ್ತವರ ಪರ ಸ್ವಾಭಾವಿಕವಾಗಿ ಸಿಂಪಥಿ ಇರುತ್ತೆ. ನಾನು ಶಾಸಕನಾಗಿ ರಿಸ್ಕ್ ತೆಗೆದುಕೊಂಡು 5-10 ಲಕ್ಷದ ಕೆಲಸವನ್ನ ಮಾಡಿಸಿದ್ದೇನೆ ಎಂದರು. ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ: ಶಂಕರ್ ಪಾಟೀಲ್ ಸಂತೋಷ್ ಪಾಟೀಲ್ ಜೈಲಿಗೆ ಹೋಗಿ ಸುದ್ದಿಗೋಷ್ಠಿ ಮಾಡುತ್ತಾರೆ. ಸಾಮಾನ್ಯ ವ್ಯಕ್ತಿಗಳು ದೆಹಲಿಗೆ ಹೋಗಿ ಸುದ್ದಿಗೋಷ್ಠಿ ಮಾಡಲು ಆಗುತ್ತಾ? ಅಷ್ಟೆಲ್ಲಾ ರಾಜಕಾರಣ ಗೊತ್ತಿರುವವನು ಆತ್ಮಹತ್ಯೆಗೆ ಯಾಕೆ ಶರಣಾದ? ನಿಜವಾಗಲೂ ಆತ್ಮಹತ್ಯೆ ನಡೆದಿದ್ಯಾ? ಇಲ್ಲಾ ಇದರ ಹಿಂದೆ ಬೇರೆ ಏನಾದರೂ ಇದ್ಯಾ? ಈ ಎಲ್ಲದರ ಬಗ್ಗೆ ಸಮಗ್ರವಾದ ತನಿಖೆಯಾಗಬೇಕು ಎಂದು ಅನುಮಾನ ವ್ಯಕ್ತಪಡಿಸಿದರು.ಕೋಟಿಗಟ್ಟಲೆ ಕಾಮಗಾರಿಯನ್ನು ಮಂಜೂರು ಆಗದೇ ಕೆಲಸ ಮಾಡೋಕೆ ಬರುತ್ತಾ? ಸಂತೋಷ್ ಸಾವಿನ ಸುತ್ತ ಅನುಮಾನದ ಹುತ್ತ ಇರೋದು ಸ್ಪಷ್ಟವಾಗಿದೆ. ಸಂತೋಷ್‍ನನ್ನು ನಮ್ಮ ಪಕ್ಷದ ಕಾರ್ಯಕರ್ತ ಅಂತಾನೂ ಹೇಳುತ್ತಾರೆ. ಕೈ ನಾಯಕ ರಾಹುಲ್ ಗಾಂಧಿ ಹೆಸರು ನಕಲು ಮಾಡಿ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿ ಟಿಕೆಟ್ ತೆಗೆದುಕೊಳ್ಳಲು ಪ್ರಯತ್ನ ಮಾಡಿದ್ದ ಅಂತಾ ಕೂಡ ಹೇಳುತ್ತಾರೆ. ಸಾವು ದುರದೃಷ್ಟಕರ, ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪಂಜಾಬ್‍ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿಗೆ ಇಡಿ ಸಂಕಷ್ಟSign in to your account
Username or Email Address


Password

 Remember Me


