ಬೀದರ್: ಹಳೆಯ ವೈಷಮ್ಯ ಹಿನ್ನೆಲೆ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಗ್ರಾಮದ ಬಳಿ ನಡೆದಿದೆ.ಮೃತ ದುರ್ದೈವಿಯನ್ನು ಅಂತೇಷ್(40) ಎಂದು ಗುರುತಿಸಲಾಗಿದ್ದು, ಪ್ರವೀಣ್ ಕುಮಾರ್ ಆರೋಪಿಯಾಗಿದ್ದಾನೆ. ಹಳೆ ವೈಷಮ್ಯ ಹಿನ್ನೆಲೆ ಪ್ರವೀಣ್ ಕುಮಾರ್ ಗೆಳೆಯ ಅಂತೇಷ್‍ನನ್ನು ಕಟ್ಟಿಗೆಯಿಂದ ಹೊಡೆದು ಹತ್ಯೆಗೈದಿದ್ದಾನೆ. ಹೀಗಾಗಿ ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಮನೆಯ ಮುಂದೆ ಶವವಿಟ್ಟು ಮೃತರ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾನು ಅಧಿಕಾರದಲ್ಲಿದ್ದಾಗ ಅಪಾಯಕಾರಿಯಾಗಿರಲಿಲ್ಲ, ಆದ್ರೆ ಈಗ ಆಗಿದ್ದೇನೆ: ಇಮ್ರಾನ್ ಖಾನ್ಮೂಲತಃ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ಅಂತೇಷ್ ಕೊಲೆಯಾಗಿದ್ದು, ಅದೇ ಗ್ರಾಮದ ಪ್ರವೀಣ್ ಕುಮಾರ್ ಊಟಕ್ಕೆಂದು ಡಾಬಾಗೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಸದ್ಯ ಈ ಸಂಬಂಧ ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಇದನ್ನೂ ಓದಿ: ಗಿಫ್ಟ್‌ ಆಗಿ ಬಂದ ನೆಕ್ಲೆಸ್‌ನ್ನು 18 ಕೋಟಿಗೆ ಮಾರಿದ್ದಕ್ಕೆ ಇಮ್ರಾನ್‌ ಖಾನ್‌ ವಿರುದ್ಧ ತನಿಖೆSign in to your account
Username or Email Address


Password

 Remember Me


