ಬೆಂಗಳೂರು: ಯಶವಂತಪುರ ವೃತ್ತದ ಬಳಿ ನಿರ್ಮಿಸಲಾಗಿರುವ ಪಟೇಲ್ ಭೈರಹನುಮಯ್ಯ ಬಹುಮಹಡಿ ವಸತಿ ನಿಲಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ.ಅಂಬೇಡ್ಕರ್ 131ನೇ ಜಯಂತಿ ಹಿನ್ನೆಲೆಯಲ್ಲಿ ಮೊದಲು ಯಶವಂತಪುರ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡಿದ್ದಾರೆ ನಂತರ ಬಹುಮಹಡಿ ವಸತಿ ನಿಲಯವನ್ನು ಲೋಕಾರ್ಪಣೆಗೊಳಿಸಿ ತೆರಳಿದ್ದಾರೆ. ಸಿಎಂಗೆ ಸಚಿವರಾದ ಅಶ್ವತ್ಥ್ ನಾರಾಯಣ, ಮುನಿರತ್ನ, ನಿರಾಣಿ, ಸಂಸದ ಸದಾನಂದಗೌಡ ಸೇರಿದಂತೆ ಪ್ರಮುಖ ಗಣ್ಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವುಂಟು ಮಾಡಿದೆ : ಯದುವೀರ್ ಒಡೆಯರ್
ಸುಮಾರು 5.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಹುಮಹಡಿ ಕಟ್ಟಡವು 60 ಮನೆಗಳನ್ನು ಒಳಗೊಂಡಿದೆ. ಇದೇ ವೇಳೆ ಸಿಎಂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೂ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. Sign in to your account
Username or Email Address


Password

 Remember Me


