ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 48 ಕೋವಿಡ್ ಕೇಸ್‌ಗಳು ಪತ್ತೆಯಾಗಿದ್ದು, ಶೂನ್ಯ ಮರಣ ಪ್ರಕರಣ ದಾಖಲಾಗಿದೆ.ಬೆಂಗಳೂರು ನಗರದಲ್ಲಿ 40, ಬೆಂಗಳೂರು ಗ್ರಾಮಾಂತರ 3, ಬೆಳಗಾವಿ 3, ಚಿಕ್ಕಮಗಳೂರು 1 ಹಾಗೂ ಯಾದಗಿರಿಯಲ್ಲಿ 1 ಕೋವಿಡ್ ಕೇಸ್ ದಾಖಲಾಗಿದೆ.ಇಲ್ಲಿಯವರೆಗೆ 40,057 ಮರಣ ಪ್ರಕರಣಗಳು ವರದಿಯಾಗಿದೆ. ಪಾಸಿಟಿವಿಟಿ ರೇಟ್ ಶೇ.0.57 ಇದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,408ಕ್ಕೆ ಇಳಿದಿದೆ. ಇಂದು ಒಟ್ಟು 86 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದನ್ನೂ ಓದಿ: ರಷ್ಯಾ ತೈಲ ಖರೀದಿ ಯಾಕೆ – ವಿದೇಶಿ ಪತ್ರಕರ್ತನಿಗೆ ಪಾಠ ಮಾಡಿ ಉತ್ತರ ಕೊಟ್ಟ ಜೈಶಂಕರ್ಈವರೆಗೆ ರಾಜ್ಯದಲ್ಲಿ ಒಟ್ಟು 6,57,14,448 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇಲ್ಲಿ ವರೆಗೆ ಒಟ್ಟು 39,04,577 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಒಟ್ಟು 8,332 ಸ್ಯಾಂಪಲ್(ಆರ್‌ಟಿಪಿಸಿಆರ್ 3,333+4,999 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಾ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ: ನಾಸೀರ್ ಹುಸೇನ್ ಪ್ರಶ್ನೆಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಮಗಳೂರು ಹಾಗೂ ಯಾದಗಿರಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಶೂನ್ಯ ಪ್ರಕರಣಗಳು ದಾಖಲಾಗಿದೆ.Sign in to your account
Username or Email Address


Password

 Remember Me


