ಬೆಂಗಳೂರು: ರಾಜ್ಯದಲ್ಲಿ ಒಟ್ಟು 34 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಂದು ಕೂಡ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.ಬೆಂಗಳೂರು ನಗರದಲ್ಲಿ 32 ಹೊರತು ಪಡಿಸಿ ಧಾರವಾಡದಲ್ಲಿ 2 ಪಾಸಿಟಿವ್ ಕೇಸ್ ದಾಖಲಾಗಿದೆ. ಇಂದು ಕೂಡ 0.00% ಮರಣ ಪ್ರಮಾಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.78% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,446ಕ್ಕೆ ತಲುಪಿದೆ. ಒಟ್ಟು 29 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ ನಿಧನಈವರೆಗೆ ರಾಜ್ಯದಲ್ಲಿ ಒಟ್ಟು 39,46,036 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,491 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಕೊರೊನಾದಿಂದಾಗಿ ರಾಜ್ಯದಲ್ಲಿ 40,057 ಮಂದಿ ಮರಣ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 53,450 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 4,341 ಸ್ಯಾಂಪಲ್ (ಆರ್​ಟಿಪಿಸಿಆರ್ 3,564 + 777 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹಿಂದೂಗಳನ್ನು ಒಂದು ಮಾಡಲು ಹೊರಟರೆ ದಕ್ಷಿಣ ಕರ್ನಾಟಕ ಬಿಜೆಪಿ ಪಾಲಿಗೆ ಬಂದ್ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 32 ಮತ್ತು ಧಾರವಾಡದಲ್ಲಿ 2 ಪಾಸಿಟಿವ್ ಕೇಸ್‍ಗಳನ್ನು ಹೊರತು ಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


