ಗದಗ: ಎಲ್ಲರೂ ಸೌಹಾರ್ದಯುತವಾಗಿ ಬಾಳಬೇಕು ಎನ್ನುವುದು ಎಲ್ಲರ ಆಶಯ. ಸಂವಿಧಾನ ಬದ್ಧವಾಗಿ ಅವರವರ ಧರ್ಮ ಪಾಲಿಸಲು ಅವಕಾಶವಿದೆ. ಆದರೆ ಒಂದು ಧರ್ಮದವರು ಇನ್ನೊಂದು ಧರ್ಮದವರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ ನೀಡಿದರು.ನಗರದ ಹೊರವಲಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಆವರಣದಲ್ಲಿ ಗೋಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಟೀಲ್, ಧಾರವಾಡ ಪ್ರಕರಣ ಏನಾಗಿದೆ ಎಂಬುದು ಗೊತ್ತಿಲ್ಲ. ಸಚಿವ ಮಾಧುಸ್ವಾಮಿ ಹೇಳಿಕೆ ಗಮನಿಸಿಲ್ಲ ಎಂಬ ಹಾರಿಕೆ ಉತ್ತರ ನೀಡಿ, ಜಾರಿಕೊಳ್ಳುವ ಕೆಲಸ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರು ಗೊಂದಲ ಮೂಡಿಸುವ ಕೆಲಸ ಮಾಡಬಾರದು: ಬಿಎಸ್‍ವೈಯಾರೋ ಟೀಕೆ ಮಾಡುತ್ತಾರೆಂದು ಮುಖ್ಯಮಂತ್ರಿಗಳು ನಡು ರಸ್ತೆಯಲ್ಲಿ ಲಾಠಿ ಹಿಡಿದು ನಿಲ್ಲಲು ಸಾಧ್ಯವಿಲ್ಲ. ಯಾವುದೋ ಸರ್ಕಲ್‌ನಲ್ಲಿ ನಿಂತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಸಿಎಂ ಬಸವರಾಜ ಬೊಮ್ಮಾಯಿ ಬಸವಣ್ಣನೂ ಹೌದು, ಬಸವರಾಜು ಹೌದು. ಆದರೆ ಮೂಖ ಬಸವಣ್ಣ ಅಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡುತ್ತಿಲ್ಲ ಎಂಬ ಹೇಳಿಕೆ ಸರಿಯಲ್ಲ ಎಂದರು. ಇದನ್ನೂ ಓದಿ: ಶಾಸ್ತ್ರದ ಪ್ರಕಾರ ವಿಶ್ವಕರ್ಮ ಜನಾಂಗದವರೇ ದೇವರ ಪ್ರತಿಮೆ ಕೆತ್ತಬೇಕು: ಡಾ. ಜ್ಞಾನನಂದನಮಗೆ ರಾಜ್ಯದ ಜನತೆ ಅಧಿಕಾರ ಕೊಟ್ಟಿದ್ದಾರೆ. ಅವರ ಬೇಕು-ಬೇಡಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಸಿದ್ದರಾಮಯ್ಯ ಹಾಗೂ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರಿಗೆ ಮಾಡಲು ಕೆಲಸವಿಲ್ಲ. ವಿನಾಕಾರಣ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್‌ವಿ ಸಂಕನೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ್ ದುಂದೂರ, ರಾಜ್ಯ ದ್ರಾಕ್ಷಾರಸ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


