ಬೀದರ್: ರಾಜ್ಯದಲ್ಲಿ ಈ ಬಾರಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗುವುದು ಪಕ್ಕಾ ಇದೆ. ಆದರೆ ಈ ಬಾರಿ ಇನ್ನೊಂದು ಪಕ್ಷದೊಂದಿಗೆ ಮೈತ್ರಿ ಮಾಡಬಾರದು ಎಂದು ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ವಿಶ್ವಾಸ ವ್ಯಕ್ತಪಡಿಸಿದರು.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲು 20 ತಿಂಗಳು ಬಳಿಕ 14 ತಿಂಗಳು ಜೊತೆಯಾಗಿ ಸಮ್ಮಿಶ್ರ ಸರ್ಕಾರ ಮಾಡಿ ಸಾಲ ಮನ್ನಾ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಸಹಿತ ಸಮ್ಮಿಶ್ರ ಸರ್ಕಾರ ಉಳಿಯಲಿಲ್ಲ ಎಂದರು. ಇದನ್ನೂ ಓದಿ: ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆಸಿಎಂ ಇಬ್ರಾಹಿಂ ಜೆಡಿಎಸ್ ಬರೋದು ಪಕ್ಕಾ. ಆದರೆ ರೋಷನ್ ಬೇಗ್ ಜೆಡಿಎಸ್‍ಗೆ ಬರೋದು ಗೋತ್ತಿಲ್ಲ. ಕಾಂಗ್ರೆಸ್ – ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಸಮಯ ಬಂದಾಗ ಹೇಳುತ್ತೆನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರು ಗೊಂದಲ ಮೂಡಿಸುವ ಕೆಲಸ ಮಾಡಬಾರದು: ಬಿಎಸ್‍ವೈSign in to your account
Username or Email Address


Password

 Remember Me


