ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ತಮ್ಮ ಪಕ್ಷ ಕಾಂಗ್ರೆಸ್‍ಗೆ ಗುಡ್ ಬೈ ಹೇಳಲು ತಯಾರಿ ನಡೆಸಿದ್ದಾರೆಂಬ ಅನುಮಾನ ಮೂಡಿದೆ. ಇತ್ತೀಚೆಗೆ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಎಸ್.ಆರ್.ಪಾಟೀಲ್ ಅವರು ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಬೆನ್ನಲ್ಲೇ ಎಸ್.ಆರ್.ಪಾಟೀಲ್ ಅಧ್ಯಕ್ಷತೆಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಉಗಮವಾಗಿದೆ.ಉತ್ತರ ಕರ್ನಾಟಕ ನೀರಿನ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಕಾಂಗ್ರೆಸ್‍ಗೆ ಟಾಂಗ್ ನೀಡಲು ಭರ್ಜರಿ ತಯಾರಿ ನಡೆದಿದೆ. ಕೃಷ್ಣ-ಮಹಾದಾಯಿ-ನವಲಿ ಸಂಕಲ್ಪಯಾತ್ರೆ ಆರಂಭಗೊಳಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹುಬ್ಬಳ್ಳಿಗೆ ಭೇಟಿ ನೀಡಿದಾಗ ಮಹದಾಯಿ ಹೋರಾಟ ಮಾಡುವ ಬಗ್ಗೆ ಭರವಸೆ ನೀಡಿದ್ದರು. ಇದನ್ನೂ ಓದಿ: ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆಸಿ ರಿಪೋರ್ಟ್ಕಾಂಗ್ರೆಸ್ ಪಕ್ಷ ಬಿಟ್ಟು ಎಸ್.ಆರ್.ಪಾಟೀಲ್ ಅವರು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯಲ್ಲಿ ಅಧ್ಯಕ್ಷತೆವಹಿಸಲು ಹೋರಾಟಕ್ಕೆ ಸಜ್ಜಾಗಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟ ಸಂದೇಶ ನೀಡಲು ಮುಂದಾಗಿದ್ದಾರೆ.ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಎಸ್.ಆರ್.ಪಾಟೀಲ್, ನೀರಿನ ವಿಚಾರದಲ್ಲಿ ಮತ್ತು ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಎಲ್ಲ ಪಕ್ಷಗಳಿಂದ ಅನ್ಯಾಯವಾಗುತ್ತಿದೆ. ಹೀಗಾಗಿ ಈ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಉಗಮವಾಗಿದ್ದು, ಪಕ್ಷಾತೀತವಾಗಿ ನೀರಿನ ಹೋರಾಟ ಮಾಡುತ್ತೇವೆ. ಕೃಷ್ಣ-ಮಹಾದಾಯಿ-ನವಲಿ ಸಂಕಲ್ಪಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.ಈ ತಿಂಗಳ 13 ರಿಂದ ಗದಗ ಜಿಲ್ಲೆಯ ನರಗುಂದದಿಂದ ಟ್ರಾಕ್ಟರ್ ರ‍್ಯಾಲಿ ಆರಂಭವಾಗುತ್ತದೆ. ಶಿರಹಟ್ಟಿತ ಫಕೀರ ದಿಂಗಾಲೇಶ್ವರ ಸ್ವಾಮೀಜಿ ರ‍್ಯಾಲಿಗೆ ಚಾಲನೆ ನೀಡಲಿದ್ದಾರೆ. 17ಕ್ಕೆ ರ‍್ಯಾಲಿ ಬಿಳಗಿ ತಾಲೂಕಿನ ಬಾಡಗಂಡಿಯಲ್ಲಿ ಸಮಾರೋಪಗೊಳ್ಳಲಿದೆ. ಬಾಪೂಜಿ ಅಂತರರಾಷ್ಟ್ರೀಯ ಶಾಲೆಯ ಮೈದಾನದಲ್ಲಿ ಬೃಹತ್ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ 25 ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಳಲಿದ್ದಾರೆ ಎಂದರು. ಇದನ್ನೂ ಓದಿ: ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್Sign in to your account
Username or Email Address


Password

 Remember Me


