ಬೆಂಗಳೂರು: ಬೆಲ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ಗೆ ಸೇರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಪಿ.ಎಫ್.ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು. ಇದನ್ನೂ ಓದಿ: ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿ ಹಿಂದುತ್ವದ ಮೇಲೆ ಪೇಟೆಂಟ್ ಹೊಂದಿಲ್ಲ: ಉದ್ಧವ್ ಠಾಕ್ರೆಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.ಇಂದು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ನಾಳೆ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತೇದ್ದೇನೆ ಎಂದರು.Sign in to your account
Username or Email Address


Password

 Remember Me


