ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಸಿದ್ಯಾವನೂರು ಗ್ರಾಮದಲ್ಲಿ ಭಾರೀ ಮಳೆ ಲಕ್ಷಾಂತರ ರೂಪಾಯಿ ಮೌಲ್ಯದ 14 ಕುರಿ, ಒಂದು ಕುದುರೆ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಕಾಗಿನೆಲೆ, ಮುಳಥಳ್ಳಿ, ತಡಸ ಸೇರಿ ಹಲವೆಡೆ ಭಾರೀ ಮಳೆಯಾಗಿದೆ. ತಡಸ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಇದನ್ನೂ ಓದಿ: ನಿಷೇಧದ ನಡುವೆಯೂ ಶೋಭಾಯಾತ್ರೆ- ಎಸ್‍ಪಿ ವಾರ್ನಿಂಗ್‍ನಿಂದ ಜಾಗ ಖಾಲಿ ಮಾಡಿದ ಮುತಾಲಿಕ್ವಿಜಯಪುರದ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿವೆ. ಇನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಾಟಾಪುರದಲ್ಲಿ ಸಿಡಿಲು ಬಡಿದು ಲಕ್ಷ್ಮಣ ಗುಡಿಗೆರಿ ಎಂಬವರು ಸಾವನ್ನಪ್ಪಿದ್ದಾರೆ.Sign in to your account
Username or Email Address


Password

 Remember Me


