ಬೆಳಗಾವಿ: ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ ಇದೀಗ ಮತ್ತೆ ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆಯೇ ಎಂಬ ಚರ್ಚೆಗಳು ನಡೆದಿವೆ.ಗೋಕಾಕ್ ಮತಕ್ಷೇತ್ರದ ಶಾಸಕರಾಗಿರುವ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೇ ಬಿಜೆಪಿ ಸರ್ಕಾರ ರಚೆನೆಗೂ ಕಾರಣವಾಗಿದ್ದರು. ಇದಾದ ನಂತರ ಸಿಡಿ ಪ್ರಕರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ಸಿಡಿ ಪ್ರಕರಣ ಮುಗಿಯುವ ಕೊನೆಯ ಹಂತಕ್ಕೆ ತಲುಪಿದ್ದು, ಕೋರ್ಟ್ ಕೇಸ್ ಕೂಡ ರಮೇಶ್ ಜಾರಕಿಹೊಳಿ ಪರವಾಗಿ ಬರುತ್ತೆ ಎಂಬ ಮಾಹಿತಿ ಕೂಡ ಇದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್- ಎಲ್ಲರೂ ತಪ್ಪದೇ ಲಸಿಕೆ ಪಡೆಯಿರಿ: ಸುಧಾಕರ್ಹೀಗಾಗಿ ಇದೆಲ್ಲವನ್ನೂ ಇಟ್ಟುಕೊಂಡು ರಮೇಶ್ ಜಾರಕಿಹೊಳಿ ಹೈಕಮಾಂಡ್ ಮೇಲೆ ಒತ್ತಡ ತಂದು ಮರಳಿ ಸಚಿವ ಸ್ಥಾನ ಪಡೆಯುತ್ತಾರೆ ಎನ್ನಲಾಗಿದೆ. ಇದರ ಮಧ್ಯೆ ಒಂದೆಡೆ ಮತ್ತೆ ಸಚಿವರಾಗಲು ರಮೇಶ್ ಜಾರಕಿಹೊಳಿ ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದರು. ಮತ್ತೊಂದೆಡೆ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅತಿ ಶೀಘ್ರದಲ್ಲೇ ಮತ್ತೆ ರಮೇಶ್ ಅಣ್ಣಾ ಜಾರಕಿಹೊಳಿ ಮಂತ್ರಿ ಆಗುತ್ತಾರೆ. ನಮ್ಮ ಸಾಹುಕಾರ್ ನಮ್ಮ ಹೆಮ್ಮೆ’ ಅಂತಾ ವಾಟ್ಸಪ್ ಗ್ರೂಪ್‍ಗಳಲ್ಲಿ ಪೋಸ್ಟ್ ಹಾಕುತ್ತಿದ್ದು. ತಮ್ಮ ಸಹೋದರ ಲಖನ್ ಜಾರಕಿಹೊಳಿ ಅಭಿಮಾನಿಗಳ ವಾಟ್ಸಪ್ ಗ್ರೂಪ್‍ನಲ್ಲಿ ಪೋಸ್ಟ್ ಹಾಕಿದ್ದಾರೆ.ಆದರೆ ಏಪ್ರಿಲ್ 16 ಹಾಗೂ 17ರಂದು ಹೊಸಪೇಟೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಾಹುಕಾರ್ ಕಣ್ಣೀರಿಟ್ಟಿದ್ದರು. ದೆಹಲಿ ಟೂರ್ ಯಶಸ್ವಿಯಾಗದ ಹಿನ್ನೆಲೆ ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯತ್ತ ಸಾಹುಕಾರ್ ಚಿತ್ತ ಹರಿಸಿದ್ದಾರಂತೆ. ಅದಕ್ಕೆ ಕಾರಣ, ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಅಮಿತ್ ಶಾ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಈ ವೇಳೆ ಅಮಿತ್ ಶಾ ಭೇಟಿಯಾಗಿ ಸಚಿವ ಸ್ಥಾನಕ್ಕೆ ಮನವಿ ಮಾಡಲು ನಿರ್ಧಾರವನ್ನು ರಮೇಶ್ ಜಾರಕಿಹೊಳಿ ಅವರ ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿSign in to your account
Username or Email Address


Password

 Remember Me


