ಬೆಂಗಳೂರು: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರೋ ಐಷಾರಾಮಿ ಹೋಟೆಲ್ ಮೇಲೆ ನಡೆದ ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು ಪತ್ತೆಯಾಗಿದ್ದಾರೆ.ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಪಾರ್ಟಿ ಆರ್ಗನೈಸ್ ಮಾಡಿದ್ದ. ಅವಧಿಗೂ ಮೀರಿ ಪಾರ್ಟಿ ನಡೆಯುತ್ತಿತ್ತು. ಬೆಳಗ್ಗಿನಜಾವ 3.30 ತನಕ ನಡೆಯುತ್ತಿದ್ದ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸೌತ್ ಪಾರ್ಟಿಯಲ್ಲಿ ಯುವಕ, ಯುವತಿಯರು ಮತ್ತಿನಲ್ಲಿ ಕುಣಿದು ಕುಪ್ಪಳಿಸ್ತಿದ್ರು. ಇದನ್ನೂ ಓದಿ: ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ- ಪವರ್ ಕಟ್ ಮಾಡಿ ಕಿಡಿಗೇಡಿಗಳ ದುಷ್ಕೃತ್ಯಪಾರ್ಟಿಯಲ್ಲಿ ಉತ್ತರ ಭಾರತ ಮೂಲದ ಯುವತಿಯರೇ ಹೆಚ್ಚು ಮಂದಿ ಇದ್ದರು. ಆರ್ಗನೈಸರ್ ಯುವಕರಿಗೆ 400, ಯುವತಿಯರಿಗೆ 300 ರೂಪಾಯಿ ಎಂಟ್ರಿ ಫೀಸ್ ಇಟ್ಟಿದ್ದ. ಪಾರ್ಟಿಯಲ್ಲಿ ಡ್ರಗ್ಸ್ ಇರುವ ಅನುಮಾನ ಇತ್ತ. ಆದರೆ ಹೋಟೆಲ್ ನಲ್ಲಿ ಡ್ರಗ್ಸ್ ದೊರೆತಿಲ್ಲ ಬದಲಾಗಿ ಪಾರ್ಟಿಯಲ್ಲಿದ್ದವರು ನಶೆಯಲ್ಲಿರೋ ಮಾಹಿತಿ ದೊರೆತಿದೆ.ಸದ್ಯ ಪಾರ್ಟಿಯಲ್ಲಿದ್ದವರನ್ನ ಮೆಡಿಕಲ್ ಚೆಕಪ್ ಮಾಡಿಸಲು ಸಿಸಿಬಿ ಪೊಲೀಸ್ರು ಮುಂದಾಗಿದ್ದಾರೆ. ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: ಪಾಕ್ ಅನ್ನು ಟಿಶ್ಯೂ ಪೇಪರ್ ಆಗಿ ಬಳಸಿ ಎಸೆಯಲಾಗಿದೆ: ಇಮ್ರಾನ್ ಕಿಡಿSign in to your account
Username or Email Address


Password

 Remember Me


