ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 77 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 1 ಮರಣ ಪ್ರಕರಣ ವರದಿಯಾಗಿದೆ.ಬೆಂಗಳೂರು ನಗರದಲ್ಲಿ 73 ಪಾಸಿಟಿವ್ ಕೇಸ್ ಮತ್ತು ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಗದಗದಲ್ಲಿ ವರದಿಯಾಗಿದೆ. ಇಂದು 1.29% ಮರಣ ಪ್ರಮಾಣ ಸೇರಿದಂತೆ ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.64% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,459ಕ್ಕೆ ಇಳಿಕೆ ಕಂಡಿದೆ. ಒಟ್ಟು 44 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಏಪ್ರಿಲ್ 10 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು – ಆರೋಗ್ಯ ಇಲಾಖೆಈವರೆಗೆ ರಾಜ್ಯದಲ್ಲಿ ಒಟ್ಟು 39,45,900 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,342 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 66,096 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11,859 ಸ್ಯಾಂಪಲ್ (ಆರ್‌ಟಿಪಿಸಿಆರ್ 8,876 + 2,983 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕರ್ನಾಟಕ ಪ್ರಗತಿ ನಿಲ್ಲಿಸಲು ಸಾಧ್ಯವಿಲ್ಲ, ತಮಿಳುನಾಡು, ತೆಲಂಗಾಣ ರಾಜ್ಯಗಳಿಗೆ ಹತಾಶೆ ಕಾಡುತ್ತಿದೆ: ಬೊಮ್ಮಾಯಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 73, ಚಿತ್ರದುರ್ಗ, ದಕ್ಷಿಣಕನ್ನಡ 2, ಗದಗ ಮತ್ತು ಮೈಸೂರಿನಲ್ಲಿ ತಲಾ ಒಂದೊಂದು ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


