ಮೈಸೂರು: ಕಾಂಗ್ರೆಸ್ (Congress) ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ (GT Deve Gowda), ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.ಮೈಸೂರಿನಲ್ಲಿ (Mysuru) ಈ ಕುರಿತು ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಲಿಲ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ವಿಶ್ವಕಪ್‌ ಗೆದ್ದ ಭಾರತಕ್ಕೆ ಧೋನಿ ವಿಶ್‌ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ದೀರಿ. ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾಧ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದರೆ ಎಷ್ಟು ವರ್ಷ ಎಂದು ಗೊತ್ತಿಲ್ಲ ಎಂದರು. ಇದನ್ನೂ ಓದಿ: ಕೊಹ್ಲಿ ಜೊತೆಗೆ ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಹಿಟ್‌ಮ್ಯಾನ್‌ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಸಿದ್ದರಾಮಯ್ಯಗೆ ಅಧಿಕಾರ ಹೇಗೆ ಉಳಿಸಿಕೊಳ್ಳಬೇಕು ಎಂಬ ಬಗ್ಗೆ ಗೊತ್ತಿದೆ. ಸಿದ್ದರಾಮಯ್ಯ ಸುದೀರ್ಘವಾಗಿ ಮಂತ್ರಿ, ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. 15 ಭಾರಿ ಹಣಕಾಸ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಯಾವ ರೀತಿ ಅಧಿಕಾರ ಉಳಿಸಿಕೊಳ್ಳಬೇಕೆಂಬ ಬಗ್ಗೆ ಅನುಭವ ಅವರ ಜೀವನದಲ್ಲಿ ಸಾಕಷ್ಟು ಆಗಿದೆ. ಹೀಗಾಗಿ ಸಡನ್ ಆಗಿ ಅವರು ಬಿದ್ದು ಬಿಡುತ್ತಾರೆ ಎಂದು ನಾನು ಹೇಳಲ್ಲ. ರಾಜ್ಯ ಸರ್ಕಾರ ಪತನವಾಗುತ್ತೆ, ನಾವು ಬೀಳಿಸುತ್ತೇವೆ ಎಂಬ ಬಗ್ಗೆ ನಾನು ಮಾತನಾಡಲ್ಲ. ಸಂಪೂರ್ಣ ಬಹುಮತವಿರುವ ಸರ್ಕಾರ ಬೀಳಿಸುವ ಪ್ರಶ್ನೆಯೇ ಇಲ್ಲ. ಅವರ ಪಕ್ಷದಲ್ಲೇ ದಿಢೀರ್ ಭಿನ್ನಾಭಿಪ್ರಾಯ ಬಂದರೇ ಸರ್ಕಾರ ಬೀಳಬಹುದು ಎಂದು ಹೇಳಿದರು. ಇದನ್ನೂ ಓದಿ: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆವಾಲ್ಮೀಕಿ ನಿಗಮದ ಭ್ರಷ್ಟಾಚಾರ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನೂರಕ್ಕೆ ನೂರು ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರೇ ಈ ಪ್ರಕರಣದ ಜವಾಬ್ದಾರಿ ಹೊರಬೇಕು. ಸಿದ್ದರಾಮಯ್ಯ ಹಣಕಾಸು ಸಚಿವರಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೆ ಹಣ ಮತ್ತೊಂದು ಅಕೌಂಟ್‌ಗೆ ಡೆಪಾಸಿಟ್ ಮಾಡಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಜವಾಬ್ದಾರಿ ಇದೆ. ಈ ಪ್ರಕರಣವನ್ನ ಸಿಬಿಐ ತನಿಖೆಗೆ ಕೊಡಬೇಕು. ಎಸ್ಟಿ ಸಮುದಾಯದ ನೂರಾರು ಕೋಟಿ ಹಣ ಹಗಲು ದರೋಡೆಯಾಗಿದೆ. ಇದು ಎಲ್ಲರೂ ತಲೆ ತಗ್ಗಿಸುವ ವಿಚಾರ. ಸಿಎಂ ಸಿದ್ದರಾಮಯ್ಯ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಲು ಸಾಧ್ಯವೇ ಇಲ್ಲ ಎಂದರು. ಇದನ್ನೂ ಓದಿ: ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್ರಾಜ್ಯದಲ್ಲಿ ಅಭಿವೃದ್ಧಿ ಎಂಬುದನ್ನ ಸಂಪೂರ್ಣವಾಗಿ ಕೈ ಬಿಟ್ಟಿದ್ದಾರೆ. 13 ತಿಂಗಳಿನಿಂದ ಯಾವ ಗುಂಡಿಗಳು ಮುಚ್ಚಿಲ್ಲ, ರಸ್ತೆ ಮಾಡಿಲ್ಲ. ನನ್ನ ಕ್ಷೇತ್ರಕ್ಕೆ ಯಾವ ಇಲಾಖೆಯಿಂದಲೂ ಒಂದು ರೂ. ಅನುದಾನ ಬಂದಿಲ್ಲ. ಹಿಂದೆ ಜಾರಿಯಲ್ಲಿರುವ ಅಮೃತ ಯೋಜನೆಯ ಕೆಲಸಗಳು ಮಾತ್ರ ನಡೆಯುತ್ತಿದೆ. ಈ ಹಿಂದೆ ಒಂದು ಕ್ಷೇತ್ರಗಳಿಗೆ 20 ಫಲಾನುಭವಿಗಳಿಗೆ ಕಾರು, ಸ್ಕೂಟರ್ ಕೊಡುತ್ತಿದ್ದರು. ಈಗ ಒಂದು ಕ್ಷೇತ್ರಕ್ಕೆ ಒಂದು ಕಾರು, ಸ್ಕೂಟರ್ ಕೊಡುತ್ತಾರೆ. ಎರಡು ಲಕ್ಷ ಜನ ಸಂಖ್ಯೆಯ ಕ್ಷೇತ್ರದಲ್ಲಿ ಯಾರಿಗೆ ಅಂತ ಕೊಡೋದು. ಲೋಕಸಭಾ ಚುನಾವಣಾ ವೇಳೆ ಗ್ಯಾರಂಟಿಗಳ ಮೇಲೆ ಸಂಪೂರ್ಣ ನಿಗಾವಹಿಸಿದರು. ಕ್ಷೇತ್ರದ ಜನರಿಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೆಲಸಗಳು, ಅಭಿವೃದ್ಧಿ ಏನು ಆಗಲ್ಲ ಎಂಬುದು ಜನರಿಗೆ ಅರಿವಾಗುತ್ತಿದೆ. ಸೂರಜ್ ರೇವಣ್ಣ ವಿರುದ್ಧ ತನಿಖೆ ನಡೆಯುತ್ತಿದೆ. ವರದಿ ಬಂದ ತಕ್ಷಣ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್






 Advertisement 




Sign in to your account
Username or Email Address


Password

 Remember Me


