ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾದ ನೆರವಿನ ವಿಚಾರದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಹೇಳಿದ್ದಾರೆ.ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಸಿಗಬೇಕಾದ ನೆರವಿನ ವಿಚಾರದಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರುಗಳು ಹಾಗೂ ಸಂಸದರು ಹೇಳಿದ್ದಾರೆ. ಶುಕ್ರವಾರ ಸಂಸದರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಎಲ್ಲರೂ ಕೂಡ ಮುಕ್ತವಾಗಿ ಮಾತಾಡಿದ್ದೇವೆ. ನಾವೆಲ್ಲರೂ ಸಹಕಾರ ನೀಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಾರಾದರೂ ಆರಾಮಾಗಿ ಇರುತ್ತಾರಾ: ದರ್ಶನ್‌ ಭೇಟಿಯ ನಂತರ ರಕ್ಷಿತಾ ಪ್ರೇಮ್‌ ಭಾವುಕಮುಖ್ಯವಾಗಿ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಎರಡು ತಾಸು ನಮ್ಮೊಂದಿಗೆ ಚರ್ಚಿಸಿದ್ದಾರೆ. ಭದ್ರಾ ಮೇಲ್ದಂಡೆ ವಿಚಾರದಲ್ಲಿ ಇನ್ನೂ ಸ್ಪಷ್ಟ ಮಾಹಿತಿ ಬಂದಿಲ್ಲ. ಎಲ್ಲರೂ ಮಹದಾಯಿ ಹಾಗೂ ಬೇರೆ ವಿಚಾರದಲ್ಲಿ ಸಹಕರಿಸುತ್ತೇವೆ ಎಂದಿದ್ದಾರೆ. ಮಾಜಿ ಸಿಎಂಗಳಿಗೂ ಈ ಬಗ್ಗೆ ಅರಿವಿದೆ ಎಲ್ಲಾ ಸಮಸ್ಯೆ ಬಗೆ ಹರಿಸುತ್ತಾರೆ ಎಂದರು. ಇದನ್ನೂ ಓದಿ: UGCET: ದಾಖಲೆಗಳ ಆನ್‌ಲೈನ್ ಪರಿಶೀಲನೆ – ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟSign in to your account
Username or Email Address


Password

 Remember Me


