ಬೆಂಗಳೂರು: ಸಿಲಿಕಾನ್ ಸಿಟಿಯ 9 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಯಾರೂ ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಎಲ್ಲಾ ರೀತಿಯ ತನಿಖೆ ನಡೆಯುತ್ತಿದೆ. ಎಲ್ಲಿಂದ ಕರೆ ಬಂದಿದೆ ಎನ್ನುವುದರ ಬಗ್ಗೆ ತನಿಖೆಯಾಗುತ್ತಿದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಕೆಟ್ಟ ಹೆಸರು ತರಬೇಕು ಎಂದು ಹೇಳಿ ಈ ರೀತಿ ಪದೇ ಪದೇ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಾಲೆಗೆ ಬಾಂಬ್ ಬೆದರಿಕೆಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ಈಗಾಗಲೇ ನಾವು ಪೊಲೀಸರಿಗೆ ಕಾಲ್ ಡಿಟೈಲ್ಸ್ ಚೆಕ್ ಮಾಡಲು ಹೇಳಿದ್ದು, ಆದಷ್ಟೂ ಬೇಗ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಸೂಚಿಸಿದ್ದೇವೆ. ಕರ್ನಾಟಕ ಪ್ರಗತಿ ಹೊಂದುತ್ತಿರುವ ರಾಜ್ಯ. ಅದಕ್ಕಾಗಿ ಇಲ್ಲಿ ಶಾಂತಿ ಕದಡಲು ಕೆಲವರಿಂದ ಹುನ್ನಾರ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗSign in to your account
Username or Email Address


Password

 Remember Me


