ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ನಗರದ ನ್ಯೂಮಂಡ್ಲಿ ಬಡಾವಣೆಯಲ್ಲಿ ನಡೆದಿದೆ.ಹಲ್ಲೆಗೊಳಗಾದ ಯುವಕನನ್ನು ಮಧು (21) ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮೇಲುಕೋಟೆ ಚೆಲುವನಾರಾಯಣನಿಗೆ ದೀವಟಿಗೆ ಸಲಾಂ ಆರತಿ ವಿವಾದ – ಸಂಧ್ಯಾರತಿ ಎಂದು ಕರೆಯುವಂತೆ ಪಟ್ಟುಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡಿಕೊಂಡಿರುವ ಮಧು ಗುರುವಾರ ಮಧ್ಯಾಹ್ನ ನ್ಯೂ ಮಂಡ್ಲಿಯ 1ನೇ ಕ್ರಾಸ್‌ನಲ್ಲಿ ಹೂವು ಕಟ್ಟಲು ತೆರಳುತ್ತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದವರು ಹಾಗೂ ಸ್ಥಳದಲ್ಲಿದ್ದ ಯುವಕರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಒಟ್ಟು ಆರು ಮಂದಿ ಯುವಕರು ವಿನಾಃಕಾರಣ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.ಹಲ್ಲೆಗೊಳಗಾದ ಯುವಕನಿಗೆ ಈ ಹಿಂದೆ ಕಿಡ್ನಿ ಆಪರೇಷನ್ ಆಗಿತ್ತು. ಆ ಜಾಗಕ್ಕೂ ಹಲ್ಲೆ ನಡೆಸಲಾಗಿದ್ದು, ಯುವಕ ತೀವ್ರ ನೋವಿನಿಂದ ಬಳಲುತ್ತಿದ್ದಾನೆ. ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಿ: ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.Sign in to your account
Username or Email Address


Password

 Remember Me


