ಬೆಂಗಳೂರು: 12 ಸಾವಿರ ರೂ. ಹಣ ಕಳೆದುಕೊಂಡಿದ್ದಕ್ಕೆ ಸ್ವಂತ ಮಗನನ್ನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆಯೊಂದು ಬೆಂಗಳೂರಿನ ಆಜಾದ್ ನಗರದಲ್ಲಿ ನಡೆದಿದೆ.ಇಲ್ಲಿನ ನಿವಾಸಿ ಸುರೇಂದ್ರ ಎಂಬವರೇ ತಮ್ಮ ಮಗ ಅರ್ಪಿತ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಮಾನವೀಯ ಘಟನೆಯ ದೃಶ್ಯವು ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹಿಜಬ್, ಕುಂಕುಮ ಇಟ್ಟಿದ್ದಕ್ಕೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕ ಹಲ್ಲೆ
ಕಳೆದ ವಾರ ಅರ್ಪಿತ್ 12 ಸಾವಿರ ರೂ. ಕಳೆದುಕೊಂಡಿದ್ದಕ್ಕೆ ಸುರೇಂದ್ರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ದೇಹದ ಬಹುಪಾಲು ಭಾಗ ಸುಟ್ಟುಹೋಗಿತ್ತು ಎನ್ನಲಾಗಿದೆ. ಅರ್ಪಿತ್‌ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ನರಳಿ ಇಂದು ಮೃತಪಟ್ದಿದಾರೆ.Sign in to your account
Username or Email Address


Password

 Remember Me


