ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 33 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಬೆಂಗಳೂರು ಹೊರತು ಪಡಿಸಿ ಇತರ ಮೂರು ಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 1 ಮರಣ ಪ್ರಕರಣ ಪತ್ತೆಯಾಗಿದೆ.ಬೆಂಗಳೂರು ನಗರ ಒಂದರಲ್ಲೇ 28, ಬೆಳಗಾವಿ ಮತ್ತು ದಕ್ಷಿಣಕನ್ನಡದಲ್ಲಿ ತಲಾ 2 ಮತ್ತು ಬಳ್ಳಾರಿಯಲ್ಲಿ 1 ಸೇರಿ ಒಟ್ಟು 33 ಪಾಸಿಟಿವ್ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಏಕೈಕ ಮರಣ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ: ಡಿಕೆಶಿಮರಣ ಪ್ರಮಾಣ 0.99% ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,056 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.23% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,415ಕ್ಕೆ ಇಳಿಕೆ ಕಂಡಿದೆ. ಒಟ್ಟು 85 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಈವರೆಗೆ ರಾಜ್ಯದಲ್ಲಿ ಒಟ್ಟು 39,45,760 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,247 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 87,574 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 13,824 ಸ್ಯಾಂಪಲ್ (ಆರ್‌ಟಿಪಿಸಿಆರ್ 9,328 + 4,496 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 28, ಬೆಳಗಾವಿ ಮತ್ತು ದಕ್ಷಿಣಕನ್ನಡದಲ್ಲಿ 2 ಮತ್ತು ಬಳ್ಳಾರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


