ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಪ್ರವಾಸಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನನಹಳ್ಳಿ ಗೇಟ್ ಬಳಿ ನಡೆದಿದೆ.ಹೈದರಾಬಾದ್ ಮೂಲದ ಜಯಲಕ್ಷ್ಮಿ(50) ಮೃತ ದುರ್ದೈವಿ. 58 ವರ್ಷದ ವೆಂಕಯ್ಯ ಅವರಿಗೆ ಕಾಲು ಮುರಿದಿದ್ದು, ರಾಜೇಶ್, ಪದ್ಮಾವತಿ ಹಾಗೂ ಇಬ್ಬರು ಮಕ್ಕಳು ಮತ್ತು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 22 ಐಪಿಎಸ್‌ ಅಧಿಕಾರಿಗಳು ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ- ಎಂಎಚ್‌ಒಬೆಂಗಳೂರಿನಿಂದ ಊಟಿಗೆ ತೆರಳುತ್ತಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ಕಾರು ಇದಾಗಿದ್ದು, ಚಾಲಕನ ಅತೀ ವೇಗದಿಂದ ನಿಯಂತ್ರಿಸಲಾಗದೇ ಮರಕ್ಕೆ ಡಿಕ್ಕಿ ಹೊಡೆದಿರುವುದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ದೌಡಾಯಿಸಿ ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ವಶಕ್ಕೆ ಪಡೆದ ಸಿಬಿಐSign in to your account
Username or Email Address


Password

 Remember Me


