ಬೆಂಗಳೂರು: ಚಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಉರ್ದು ಮಾತಾಡಲು ಬರಲಿಲ್ಲವೆಂದು ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.ಮಂಗಳವಾರ ಯುವಕ ಚಂದ್ರುನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಹಿನ್ನೆಲೆ ಬುಧವಾರ ಆರಗ ಜ್ಞಾನೇಂದ್ರ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ್ದು, ಚಂದ್ರು ಹತ್ಯೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಆರೋಪಿಗಳು ಉರ್ದು ಮಾತಾಡಲು ಹೇಳಿದ್ದಾರೆ. ಆದರೆ ಚಂದ್ರುವಿಗೆ ಉರ್ದು ಮಾತಾಡಲು ಬರಲಿಲ್ಲ ಎಂದು ವಿವರಿಸಿದರು. ಇದನ್ನೂ ಓದಿ: ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆಚಂದ್ರುವಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಅಂತ ಹೇಳಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಚೂರಿಯಿಂದ ಚುಚ್ಚಿ-ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಚಂದ್ರು ಒಬ್ಬ ದಲಿತ ಯುವಕ. ಕೆಲವರ ಬಂಧನ ಆಗಿದೆ. ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

 Advertisement 










 Advertisement 











 Advertisement 




Sign in to your account
Username or Email Address


Password

 Remember Me


