ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್‌ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬೀಗ ಹಾಕಬೇಕು: ಮುತಾಲಿಕ್ ಕಿಡಿಕೆಲ ದಿನಗಳ ಹಿಂದೆ ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ್ ಭಟ್ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ್ದರುರೀ ವೇಳೆ ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ನಡೆಸಲಾಗಿತ್ತು. ಮಂಗಳೂರಿನಲ್ಲಿ ಸಿಎಫ್‌ಐ ವಿದ್ಯಾರ್ಥಿ ಸಂಘಟನೆಯಿಂದ ಧರಣಿ ನಡೆಸಲಾಗಿತ್ತು. ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಮಾತು ತಪ್ಪಿದ್ರೆ 2023ಕ್ಕೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ: ಹೆಚ್‍ಡಿಕೆ Sign in to your account
Username or Email Address


Password

 Remember Me


