ಹಾವೇರಿ: ಬಿರುಗಾಳಿ ಸಮೇತ ಸುರಿದ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಕುಂಬಾರಗೇರಿ ಓಣಿಯಲ್ಲಿ ನಡೆದಿದೆ.ಮಮ್ತಾಜ್ ಬಾಲೇಬಾಯಿ (42) ಮೃತ ಮಹಿಳೆ. ಏಳು ಗಂಟೆ ಸುಮಾರಿಗೆ ಗುಡುಗು, ಸಿಡಿಲು ಮತ್ತು ಭಾರಿ ಗಾಳಿಯೊಂದಿಗೆ ಮಳೆ ಸುರಿದ ಈ ದುರ್ಘಟನೆ ಸಂಭವಿಸಿದೆ. ಮನೆಯ ಮೇಲ್ಛಾವಣಿಯ ಮೇಲಿನ ಸಿಮೆಂಟ್ ಇಟ್ಟಿಗೆ ಮಹಿಳೆ ತಲೆ ಮೇಲೆ ಬಿದ್ದಿದ್ದರಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆಹಾವೇರಿ ನಗರ, ಸೇರಿದಂತೆ ಹಾವೇರಿ ತಾಲ್ಲೂಕಿನಲ್ಲಿ ಬಿರುಗಾಳಿ ಸಮೇತ ಮಳೆಗೆ ವಿದ್ಯುತ್ ಸಂಪರ್ಕ ವನ್ನ ಕಡಿತ ಮಾಡಲಾಗಿದೆ. ಸ್ಥಳಕ್ಕೆ ಗುತ್ತಲ ಠಾಣೆ ಪಿಎಸ್‍ಐ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುತ್ತಲ ಪಟ್ಟಣದ ಹಲವೆಡೆ ಮಳೆ ಗಾಳಿಗೆ ವಿದ್ಯುತ್ ಕಂಬ ಉರುಳಿವೆ. ಕೆಲವು ವಿದ್ಯುತ್ ಕಂಬಗಳು ಮನೆಯ ಮೇಲೆ ಬಿದ್ದು, ಮನೆ ಹಾನಿಯಾಗಿವೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


