ದಿಯಾ ಹಾಗೂ ಲವ್ ಮಾಕ್ಟೇಲ್ ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ನಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ  ‘ಫಾರ್ ರಿಜಿಸ್ಟರೇಷನ್’ ದ ಫಸ್ಟ್ ಲುಕ್ ಯುಗಾದಿ ದಿನದಂದು ಬಿಡುಗಡೆ ಆಗಿದೆ. ಈ ಸಿನಿಮಾದ ಮೊದಲ ನೋಟಕ್ಕೆ ಅಭಿಮಾನಿಗಳು ಕೂಡ ಫಿದಾ ಆಗಿದ್ದಾರೆ. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚಸಾಮಾಜಿಕ  ಜಾಲತಾಣಗಳಲ್ಲಿ ಈಗಾಗಲೇ  ಒಂದು ಮಿಲಿಯನ್ ಗೂ ಅಧಿಕ ಲೈಕ್ಸ್ ದೊರಕಿದೆ. ಅಲ್ಲದೇ ಈ ಜೋಡಿಯ ಬಗ್ಗೆ ಸಾಕಷ್ಟು ಕಾಮೆಂಟ್ಸ್ ಕೂಡ ಹರಿದು ಬರುತ್ತಿದೆ. ಈ ಸಿನಿಮಾದ ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಈ ಚಿತ್ರದಲ್ಲಿ ಪೃಥ್ವಿ ಆಶು ಪಾತ್ರದಲ್ಲಿ ಹಾಗೂ ಮಿಲನಾ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರದ್ವಾರಕನಾಥ್ ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜತೆಗೆ ಕಥೆ, ಚಿತ್ರಕಥೆಯನ್ನು ಬರೆದಿದ್ದಾರೆ. ಆರ್.ಕೆ.ಹರೀಶ್ ಸಂಗೀತ ನಿರ್ದೇಶನದಲ್ಲಿ ಹಾಡುಗಳು ತಯಾರಾಗಿದ್ದು, ಅಭಿಷೇಕ್ ಕಳತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನ ಚಿತ್ರಕ್ಕಿದೆ.Sign in to your account
Username or Email Address


Password

 Remember Me


