ತುಮಕೂರು: ಎಸ್‍ಎಸ್‍ಎಲ್‌ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಅಪಘಾತಕ್ಕಿಡಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.ನವೀನ್ ಮೃತ ವಿದ್ಯಾರ್ಥಿ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿ ಘಟನೆ ನಡೆದಿದೆ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಮೂವರು ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕಿನಲ್ಲಿ ತೆರಳುತ್ತಿದ್ದ ಮತ್ತಿಬ್ಬರು ವಿದ್ಯಾರ್ಥಿಗಳಾದ ಶರತ್, ದರ್ಶನ್‍ಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಡಾ. ರಾಜೇಂದ್ರಪ್ರಸಾದ್ ಹೈಸ್ಕೂಲ್‍ನಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಅಮೃತ್ತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 8 ಅಪರಾಧಿಳಿಗೆ ಜೀವಾವಧಿ ಶಿಕ್ಷೆ: ಬೆಳಗಾವಿ ಕೋಕಾ ನ್ಯಾಯಾಲಯ ಆದೇಶಕಳೆದ ಐದು ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಸಂಬಂಧ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಬೆನ್ನಲ್ಲೇ ಹೃದಯಾಘಾತವಾಗಿ ಅಸುನೀಗಿದಳು. ಇನ್ನು ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ. ಇದನ್ನೂ ಓದಿ: ಮೈಕ್ ತೆಗೆಸದಿದ್ದರೆ, ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ: ಮುತಾಲಿಕ್Sign in to your account
Username or Email Address


Password

 Remember Me


