ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರು ಹಿಜಬ್ ಧರಿಸಿ ಹಾಜರಾಗುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮೌಖಿಕ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರಿಗೆ ಸದ್ಯ ಯಾವುದೇ ಡ್ರೆಸ್ ಕೋಡ್ ಅನ್ನು ನೀಡಲಾಗಿಲ್ಲ. ಆದರೂ ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ಉಂಟಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.ಉಪನ್ಯಾಸಕರು ಹಿಜಬ್ ತೆಗೆದು ಪರೀಕ್ಷಾ ಕೆಲಸಕ್ಕೆ ಹಾಜರಾದರೆ ಮಾತ್ರವೇ ಅವರಿಗೆ ಕೆಲಸಕ್ಕೆ ಅವಕಾಶ ನೀಡಬೇಕು. ಒಂದು ವೇಳೆ ಉಪನ್ಯಾಸಕರು ಹಿಜಬ್ ತೆಗೆಯದೇ ಬಂದಲ್ಲಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲು ಇಲಾಖೆ ನಿರ್ಧರಿಸಿದೆ. ಇದನ್ನೂ ಓದಿ: ಹಲಾಲ್ ದಂಗಲ್ ಇದು ಅಂತ್ಯವಲ್ಲ ಆರಂಭಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾದ ಮೊದಲ ದಿನ ಶಿಕ್ಷಕಿಯೊಬ್ಬರು ಹಿಜಬ್ ಧರಿಸಿ ಬಂದಿದ್ದ ಘಟನೆ ನಡೆದಿತ್ತು. ಆ ಸಂದರ್ಭ ಶಿಕ್ಷಕಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿತ್ತು. ಮುಂದೆಯೂ ಈ ರೀತಿ ನಡೆದಲ್ಲಿ ಇದೇ ನಿಯಮ ಮುಂದುವರಿಸುವಂತೆ ತಿಳಿಸಲಾಗಿದೆ.ಪ್ರಸ್ತುತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಏಪ್ರಿಲ್ ಅಂತ್ಯದಿಂದ ಪ್ರಾರಂಭವಾಗಲಿರುವ ದ್ವೀತಿಯ ಪಿಯುಸಿ ಪರೀಕ್ಷೆಗೂ ಈ ನಿಯಮ ಅನ್ವಯವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.ನಿಷೇಧ ಏಕೆ?
ಸದ್ಯ ಶಿಕ್ಷಕರು, ಉಪನ್ಯಾಸಕರಿಗೆ ಡ್ರೆಸ್ ಕೋಡ್ ಇಲ್ಲ. ಆದರೂ ಇದೊಂದು ಸೂಕ್ಷ್ಮ ವಿಚಾರವಾಗಿದೆ. ಶಿಕ್ಷಕರು ಪರೀಕ್ಷಾ ಕೇಂದ್ರಗಳಲ್ಲಿ ಹಿಜಬ್ ಧರಿಸಿ ಕೆಲಸಕ್ಕೆ ಬಂದರೆ ಮಕ್ಕಳ ಮೇಲೆ ಪರಿಣಾಮ ಬೀರುವ ಆತಂಕವಿದೆ. ಇದನ್ನೂ ಓದಿ: ಧ್ವನಿವರ್ಧಕ ಬ್ಯಾನ್ ಮಾಡೋದಾದ್ರೆ, ಚರ್ಚ್, ದೇವಾಲಯಗಳಲ್ಲೂ ಬ್ಯಾನ್ ಮಾಡಿ: ಉಮರ್ ಷರೀಫ್ಈಗಾಗಲೇ ವಿದ್ಯಾರ್ಥಿಗಳಿಗೆ ಹಿಜಬ್ ನಿಷೇಧ ಹಾಕಲಾಗಿದೆ. ಶಿಕ್ಷಕಿಯರಿಗೆ ಹಿಜಬ್ ಧರಿಸಲು ಅವಕಾಶ ಕೊಟ್ಟರೆ ವಿವಾದ ಮತ್ತೆ ಪ್ರಾರಂಭವಾಗುವ ಆತಂಕವಿದೆ. ಶಿಕ್ಷಕರಿಗೆ ಡ್ರೆಸ್ ಕೋಡ್ ಇಲ್ಲದೇ ಇರುವುದರಿಂದ ಹಿಜಬ್ ಬಗ್ಗೆಯೂ ಯಾವುದೇ ಕ್ರಮ ಇಲ್ಲ. ಆದರೂ ಹಿಜಬ್ ಧರಿಸಿ ಬರುವ ಶಿಕ್ಷಕರನ್ನು ಪರೀಕ್ಷಾ ಕೆಲಸದಿಂದ ಬಿಡುಗಡೆ ಮಾಡಲು ಇಲಾಖೆ ಸೂಚನೆ ನೀಡಿದೆ.Sign in to your account
Username or Email Address


Password

 Remember Me


