ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 50 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ ಒಂದರಲ್ಲೇ 49 ಮತ್ತು ಬೆಳಗಾವಿಯಲ್ಲಿ 1 ಹೊರತು ಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ. ಅಲ್ಲದೆ ಶೂನ್ಯ ಮರಣ ಪ್ರಕರಣ ಇಂದು ಕೂಡ ಮುಂದುವರಿದಿದೆ.ಮರಣ ಪ್ರಮಾಣ 0.%ಯಲ್ಲಿ ಮುಂದುವರಿದಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 40,054 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 0.46%ಕ್ಕೆ ಮತ್ತು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,515ಕ್ಕೆ ಇಳಿಕೆ ಕಂಡಿದೆ. ಒಟ್ಟು 51 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ WHOಈವರೆಗೆ ರಾಜ್ಯದಲ್ಲಿ ಒಟ್ಟು 39,45,660 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,049 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 8,922 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,843 ಸ್ಯಾಂಪಲ್ (ಆರ್‌ಟಿಪಿಸಿಆರ್ 7,892 + 2,951 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕ್ರಿಕೆಟ್ ಆಡಲು ಹೋಗಿದ್ದವ ಹೃದಯಾಘಾತದಿಂದ ಸಾವುಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 49 ಮತ್ತು ಬೆಳಗಾವಿಯಲ್ಲಿ 1 ಪ್ರಕರಣ ಹೊರತು ಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


