ಬೆಳಗಾವಿ: ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಆದರೆ ಜನರ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ಪಂದಿಸಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರಾಣಿ ವಧೆ ಮಾಡಿ ತಿನ್ನುವುದರಲ್ಲಿ ಮಾನವೀಯತೆ ಎಲ್ಲಿಂದ ಬಂತು: ದೇವನೂರುಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಪಕ್ಷ ಸಂಘಟನೆ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ: ಜಗದೀಶ್ ಶೆಟ್ಟರ್ಪದವೀಧರರ ಹಾಗೂ ಶಿಕ್ಷಕರ ಮತಕ್ಷೇತ್ರ ಚುನಾವಣೆಗೆ ಅಧಿಕೃತ ಅಭ್ಯರ್ಥಿಗಳನ್ನು ಇನ್ನೂ ಘೋಷಣೆ ಮಾಡಿಲ್ಲ. ರಾಜ್ಯ ನಾಯಕರೊಂದಿಗೆ ಚರ್ಚಿಸಿ ಆದಷ್ಟು ಬೇಗ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.Sign in to your account
Username or Email Address


Password

 Remember Me


