ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಸೋಮವಾರ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ.ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಅವರು ಆಪ್‌ ಪಕ್ಷದ ಧ್ವಜ ಹಿಡಿಯಲಿದ್ದಾರೆ. ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿರುವ ಸಾಧ್ಯತೆಯಿದೆ.  ಇದನ್ನೂ ಓದಿ: ವಿಶ್ವಕಪ್‍ನಲ್ಲಿ ದಾಖಲೆ ಬರೆದ ಮಿಚೆಲ್ ಸ್ಟಾರ್ಕ್, ಅಲಿಸ್ಸಾ ಹೀಲಿ ದಂಪತಿLast trip home after curtains down of 32 years in IPS. I have extreme gratitude to my family, the people of Karnataka and all my colleagues,friends,elders & young people in my life and finally the Governments of Karnataka across parties???????? heading into choppy seas pic.twitter.com/6oXcxn8htx— Bhaskar Rao (@Nimmabhaskar22) April 2, 2022ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆಯನ್ನು ಅಂಗೀಕರಿಸಿತ್ತು. ಇದನ್ನೂ ಓದಿ: ಮಹಾರಾಷ್ಟ್ರದ ಹಳ್ಳಿಗೆ ಆಕಾಶದಿಂದ ಬಿತ್ತು ವಸ್ತು – ಚೀನಾದ ರಾಕೆಟ್ ಬಗ್ಗೆ ಅನುಮಾನ1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು.Sign in to your account
Username or Email Address


Password

 Remember Me


