ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಟಣಮನಕಲ್ ಬಳಿ ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ.ಮೃತ ದುರ್ದೈವಿಗಳನ್ನು ಸಂತೋಷ್ ಹಾಗೂ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಸದ್ಯ ಸಂತೋಷ್ ಶವ ನದಿಯಲ್ಲಿ ಪತ್ತೆಯಾಗಿದ್ದು, ಅನಿಲ್ ಕುಮಾರ್ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಕೇಜ್ರಿವಾಲ್, ಭಗವಂತ್ ಮಾನ್ ಹರಿಯಾಣದ ಜನತೆಗೆ ಕ್ಷಮೆಯಾಚಿಸಬೇಕು : ಮನೋಹರ್ ಲಾಲ್ ಖಟ್ಟರ್ಹಟ್ಟಿ ಪಟ್ಟಣದ ಐದು ಜನ ಯುವಕರು ಕೃಷ್ಣಾ ನದಿಗೆ ಈಜಾಡಲು ಬಂದಿದ್ದರು. ಈ ವೇಳೆ ನದಿಯಲ್ಲಿ ಇಬ್ಬರು ನೀರುಪಾಲಾಗಿದ್ದು, ಇದೀಗ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಇದನ್ನೂ ಓದಿ: ನೇಪಾಳದ ಪ್ರಧಾನಿಗೆ ವಿಶಿಷ್ಟ ಉಡುಗೊರೆ ನೀಡಿದ ಪ್ರಧಾನಿ ಮೋದಿSign in to your account
Username or Email Address


Password

 Remember Me


