ಶಿವಮೊಗ್ಗ: 33 ವರ್ಷದ ವ್ಯಕ್ತಿ 16 ವರ್ಷದ ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಲ್ಲದಕೋಣೆ ಗ್ರಾಮದಲ್ಲಿ ನಡೆದಿದ್ದು, ಬಾಲ್ಯ ವಿವಾಹ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಫೆ.27 ರಂದು ಯಲ್ಲದಕೋಣೆ ಗ್ರಾಮದ ರಮೇಶ್ (33) ಹಾಗೂ ಬಳ್ಳಾರಿ ಜಿಲ್ಲೆಯ ಕೆ.ಕರ್ನಾರ್ ಹಟ್ಟಿಯ 16 ವರ್ಷದ ಬಾಲಕಿ ಜೊತೆ ವಿವಾಹ ನಡೆದಿದೆ. ವಧು ಅಪ್ರಾಪ್ತೆ ಎಂದು ತಿಳಿದಿದ್ದರೂ, ಗ್ರಾಮದ ರಾಘವೇಂದ್ರ, ಪ್ರವೀಣ್, ಅನಿಲ್, ಶ್ರೀಧರ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯೆ ಶ್ವೇತಾ ಶಿವಾನಂದ್ ನೇತೃತ್ವದಲ್ಲಿ ಬಾಲ್ಯ ವಿವಾಹ ನೆರವೇರಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ನೇಪಾಳದ ಪ್ರಧಾನಿಗೆ ವಿಶಿಷ್ಟ ಉಡುಗೊರೆ ನೀಡಿದ ಪ್ರಧಾನಿ ಮೋದಿಇದೀಗ ಬಾಲ್ಯ ವಿವಾಹ ಪ್ರಕರಣ ಬಹಿರಂಗವಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕುರಿ, ಕೋಳಿ ಪ್ರಜ್ಞೆ ತಪ್ಪಿಸುವುದು ಹೇಗೆ: ಸ್ಟನ್ನಿಂಗ್ ನಿಯಮಕ್ಕೆ ಡಿಕೆಶಿ ಕಿಡಿSign in to your account
Username or Email Address


Password

 Remember Me


