ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ.ಅಡುಗೆ ಎಣ್ಣೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗೆಟ್ಟ ಹೋಟೆಲ್ ಮಾಲೀಕರು ದರ ಏರಿಕೆಗೆ ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಹೋಟೆಲ್ ಮಾಲೀಕರು ಎರಡೂವರೆ ತಿಂಗಳ ಹಿಂದೆ ದರ ಏರಿಕೆ ಮಾಡಿದ್ದರು. ಈಗ ಕಮರ್ಷಿಯಲ್ ಗ್ಯಾಸ್ ಬೆಲೆ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಈಗ ಮತ್ತೊಮ್ಮೆ ದರ ಏರಿಕೆಗೆ ಚಿಂತನೆ ನಡೆಸಿದ್ದಾರೆ.ಸೋಮವಾರ 100ಕ್ಕೂ ಹೆಚ್ಚು ಹೊಟೇಲ್ ಮಾಲೀಕರು ಸಭೆ ಸೇರಲಿದ್ದಾರೆ. ಈ ವೇಳೆ ಬೆಂಗಳೂರು ಮತ್ತು ರಾಜ್ಯಾದ್ಯಂತ ದರ ಏರಿಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಸೋಮವಾರವೇ ಹೊಸ ದರ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಪರೀಕ್ಷೆಯ ಒತ್ತಡ ನಿಭಾಯಿಸುವುದು ಹೇಗೆ- ವಿದ್ಯಾರ್ಥಿಗಳಿಗೆ ಮೋದಿ ಟಿಪ್ಸ್‌ಬೆಲೆ ಏರಿಕೆಗೆ ಕಾರಣಗಳೇನು?
* ಕಮರ್ಷಿಯಲ್ ಗ್ಯಾಸ್ ಬೆಲೆ ನಿರಂತರ ಏರಿಕೆ.
* ಇಂದು ಕಮರ್ಷಿಯಲ್ ಗ್ಯಾಸ್ ಬೆಲೆ 260 ರೂ ಏರಿಕೆಯಾಗಿದೆ
* ಅಡುಗೆ ಎಣ್ಣೆ ಬೆಲೆ ಏರಿಕೆಯಾಗಿರುವುದು.
* ಅಗತ್ಯ ವಸ್ತುಗಳ ಬೆಲೆ ಏರಿಕೆ.
* ವಿದ್ಯುತ್ ದರ ಏರಿಕೆ.
* ಮುಂದಿನ ದಿನಗಳಲ್ಲಿ ಸರ್ಕಾರ ಹಾಲಿನ ದರ ಏರಿ ಮಾಡುವ ಸಾಧ್ಯತೆSign in to your account
Username or Email Address


Password

 Remember Me


