ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಂದು ನಿನ್ನೆಗಿಂತ ಇಳಿಕೆ ಕಂಡಿದೆ. ನಿನ್ನೆ 78 ಕೇಸ್ ದಾಖಲಾಗಿತ್ತು. ಇಂದು ಒಟ್ಟು 62 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಂದು ರಾಜ್ಯದಲ್ಲಿ ಮರಣ ಪ್ರಕರಣ ದಾಖಲಾಗಿಲ್ಲ.ಬೆಂಗಳೂರಿನಲ್ಲಿ 48 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ಮರಣ ಪ್ರಮಾಣ 0.%ಕ್ಕೆ ಇಳಿಕೆ ಕಂಡಿದೆ. ಈವರೆಗೆ ಒಟ್ಟು ರಾಜ್ಯದಲ್ಲಿ 40,054 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.29%ಕ್ಕೆ ಮತ್ತು ರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,561ಕ್ಕೆ ಇಳಿಕೆ ಕಂಡಿದೆ. ಒಟ್ಟು 70 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,45,576 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,03,919 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 91,724 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,295 ಸ್ಯಾಂಪಲ್ (ಆರ್‌ಟಿಪಿಸಿಆರ್ 16,601 + 4,694 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮಗನ ಶಿಕ್ಷಣದ ಜವಾಬ್ದಾರಿ ವಹಿಸಿದ ಅಶ್ವಿನಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 48, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 4, ಕೊಪ್ಪಳ 0, ಮಂಡ್ಯ 0, ಮೈಸೂರು 0, ರಾಯಚೂರು 0, ರಾಮನಗರ 3, ಶಿವಮೊಗ್ಗ 1, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


